ADVERTISEMENT

ತೆರೆದ ಸ್ಥಳದಲ್ಲಿ ಸಾಮೂಹಿಕ ಪ್ರಾರ್ಥನೆ ಇಲ್ಲ

ಜಿಲ್ಲೆಯಲ್ಲಿ 29 ರಂದು ಈದ್ ಮಿಲಾದ್ ಆಚರಣೆ

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2020, 7:46 IST
Last Updated 25 ಅಕ್ಟೋಬರ್ 2020, 7:46 IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದೇ 29 ರಂದು ಈದ್‌ ಮಿಲಾದ್ ಆಚರಿಸಲಾಗುತ್ತಿದ್ದು, ಹಬ್ಬದ ಆಚರಣೆಗೆ ಮಾರ್ಗಸೂಚಿಯನ್ನು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಪ್ರಕಟಿಸಿದ್ದಾರೆ.

ತೆರೆದ ಸ್ಥಳಗಳಲ್ಲಿ ಸಾಮೂಹಿಕ ಪ್ರಾರ್ಥನೆ, ಪ್ರವಚನ ಆಯೋಜಿಸುವಂತಿಲ್ಲ. ಸ್ಯಾನಿಟೈಸರ್‌ ಹಾಗೂ ಸೋಪಿನಿಂದ ಕೈತೊಳೆಯಲು ವ್ಯವಸ್ಥೆ ಮಾಡಬೇಕು. ಕಡ್ಡಾಯವಾಗಿ ಸುರಕ್ಷಿತ ಅಂತರ ಕಾಪಾಡಬೇಕು , ಸಾಮೂಹಿಕ ಮೆರವಣಿಗೆ, ತೆರೆದ ಸ್ಥಳಗಳಲ್ಲಿ ಒಂದೆಡೆ ಸೇರುವುದನ್ನು ನಿಷೇಧಿಸಲಾಗಿದೆ. ಮೊಹಲ್ಲಾಗಳಲ್ಲಿ ಹಗಲು ಮತ್ತು ರಾತ್ರಿಯ ಪ್ರವಚನ, ಸಾಂಸ್ಕೃತಿಕ ಕಾರ್ಯಕ್ರಮ, ಸಭೆ–ಸಮಾರಂಭಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT