ADVERTISEMENT

ಕುಕ್ಕೆ: 255 ಭಕ್ತರಿಂದ ಎಡೆಸ್ನಾನ ಸೇವೆ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2024, 14:18 IST
Last Updated 6 ಡಿಸೆಂಬರ್ 2024, 14:18 IST
ಕುಕ್ಕೆ ದೇವಳದಲ್ಲಿ ಶುಕ್ರವಾರ 255 ಭಕ್ತರು ಎಡೆಸ್ನಾನ ಸೇವೆ ಸಲ್ಲಿಸಿದರು
ಕುಕ್ಕೆ ದೇವಳದಲ್ಲಿ ಶುಕ್ರವಾರ 255 ಭಕ್ತರು ಎಡೆಸ್ನಾನ ಸೇವೆ ಸಲ್ಲಿಸಿದರು   

ಸುಬ್ರಹಣ್ಯ (ದಕ್ಷಿಣ ಕನ್ನಡ): ಕುಕ್ಕೆ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಸ್ಕಂದ ಪಂಚಮಿಯ ದಿನವಾದ ಶುಕ್ರವಾರ ಕುಕ್ಕೆ ಸುಬ್ರಹ್ಮಣ್ಯದಲ್ಲಿ 255 ಭಕ್ತರು ಎಡೆಸ್ನಾನ ಸೇವೆ ನೆರವೇರಿಸಿದರು.

ಗೋವು ನೈವೇದ್ಯ ಸೇವಿಸಿದ ಎಲೆಯ ಮೇಲೆ ಭಕ್ತರು ಉರುಳು ಸೇವೆ ನಡೆಸಿ ಹರಕೆ ಸಲ್ಲಿಸಿದರು. 150 ಪುರುಷರು, 103 ಮಹಿಳೆಯರು, ಮೂವರು ಮಕ್ಕಳು ಸೇವೆ ನೆರವೇರಿಸಿದರು.

ಧಾರ್ಮಿಕ ದತ್ತಿ ಇಲಾಖೆಯ ಶೈವಾಗಮ ಪಂಡಿತ ರಾಜಗೋಪಾಲ್ ಅವರ ಮಾರ್ಗದರ್ಶನದಂತೆ ದೇವರ ಮಧ್ಯಾಹ್ನದ ಮಹಾಪೂಜೆ ಬಳಿಕ ದೇವಳದ ಹೊರಾಂಗಣದ ಸುತ್ತ 432 ಬಾಳೆ ಎಲೆಗಳನ್ನು ಹಾಕಿ ಅದರ ಮೇಲೆ ದೇವರ ನೈವೇದ್ಯ ಬಡಿಸಲಾಯಿತು. ಬಳಿಕ ದೇವಳದ ಗೋವುಗಳು ಆ ಎಲೆಗಳಲ್ಲಿದ್ದ ಪ್ರಸಾದವನ್ನು ತಿಂದವು. ಹಸುಗಳು ತಿಂದ ಅನ್ನಪ್ರಸಾದದ ಮೇಲೆ ಭಕ್ತರು ಉರುಳು ಸೇವೆ ನಡೆಸಿದರು.

ADVERTISEMENT

ದೇವಳದ ಆಡಳಿತಾಧಿಕಾರಿ ಜುಬಿನ್ ಮೊಹಾಪಾತ್ರಾ, ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಎಇಒ ಯೇಸುರಾಜ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಸುಧೀರ್‌ಕುಮಾರ್ ಶೆಟ್ಟಿ, ತಾಲ್ಲೂಕು ವೈದ್ಯಾಧಿಕಾರಿ ಡಾ.ನಂದಕುಮಾರ್, ಮಾಸ್ಟರ್ ಪ್ಲ್ಯಾನ್‌ ಸಮಿತಿ ಸದಸ್ಯರಾದ ಲೋಲಾಕ್ಷ ಕೈಕಂಬ, ಪವನ್ ಎಂ.ಡಿ., ಪುರೋಹಿತ ಸರ್ವೇಶ್ವರ ಭಟ್, ದೇವಳದ ಅಧೀಕ್ಷಕ ಪದ್ಮನಾಭ ಶೆಟ್ಟಿಗಾರ್, ಶಿಷ್ಟಾಚಾರ ಅಧಿಕಾರಿ ಜಯರಾಮ ರಾವ್,  ಪ್ರಸನ್ನ ಭಟ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.