ADVERTISEMENT

ಎಡನೀರು ಕೇಶವಾನಂದ ಭಾರತಿ ಸ್ವಾಮೀಜಿ ಇನ್ನಿಲ್ಲ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2020, 16:17 IST
Last Updated 6 ಸೆಪ್ಟೆಂಬರ್ 2020, 16:17 IST
ಎಡನೀರು ಕೇಶವಾನಂದ ಭಾರತಿ ಸ್ವಾಮೀಜಿ
ಎಡನೀರು ಕೇಶವಾನಂದ ಭಾರತಿ ಸ್ವಾಮೀಜಿ   

ಕಾಸರಗೋಡು: ಜಿಲ್ಲೆಯ ಎಡನೀರು ಜಗದ್ಗುರು ಶಂಕರಾಚಾರ್ಯ ಸಂಸ್ಥಾನದ ಮಠಾಧೀಶ ಕೇಶವಾನಂದ ಭಾರತೀ ಸ್ವಾಮೀಜಿ (76) ಶನಿವಾರ ರಾತ್ರಿ 12.45ರ ಸುಮಾರಿಗೆ ಇಹಲೋಕ ತ್ಯಜಿಸಿದರು.

ಧಾರ್ಮಿಕವಾಗಿ ಸಾಂಸ್ಕೃತಿಕವಾಗಿಯೂ ಸಕ್ರಿಯರಾಗಿದ್ದ ಶ್ರೀಗಳು ಗಡಿನಾಡಿನ ಸಂಸ್ಥಾನದಲ್ಲಿ ಯಕ್ಷಗಾನ, ಸಂಗೀತದ ಕೇಂದ್ರವನ್ನಾಗಿಸಿದ್ದರು. ಯಕ್ಷಗಾನ ಕಲೆಯ ಮೇಲೆ ಅತೀವ ಪ್ರೇಮ ಹೊಂದಿದ್ದ ಸ್ವಾಮೀಜಿ ಮೇಳವನ್ನು ಮುನ್ನಡೆಸುತ್ತಾ ಸ್ವತಃ ಭಾಗವತಿಕೆಯನ್ನೂ ನಡೆಸುತ್ತಿದ್ದರು.

ಮಠದಲ್ಲಿ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುತ್ತಿದ್ದ ಶ್ರೀಗಳು ಹರಿಕಥೆಯನ್ನೂ ಮಾಡುತ್ತಿದ್ದರು. ಕರಾವಳಿಯಪ್ರಸಿದ್ದ ಯಕ್ಷಗಾನದ ಮೇಲೆ ವಿಶೇಷ ಒಲವಿದ್ದ ಶ್ರೀಗಳು, ಪ್ರತೀ ವರ್ಷ ಯಕ್ಷಗಾನ ಸಪ್ತಾಹ, ತಾಳಮದ್ದಳೆ ಕೂಟಗಳನ್ನು ನಡೆಸುತ್ತಿದ್ದರು. ಇತ್ತೀಚೆಗಷ್ಟೆ ಶ್ರೀಗಳು 60 ನೇ ಚಾತುರ್ಮಾಸ್ಯ ವ್ರತ ಪೂರೈಸಿದ್ದರು.

ADVERTISEMENT

ಕೇರಳ ಸರ್ಕಾರದ ವಿರುದ್ಧ ಅವರು ಹೂಡಿದ್ದ ದಾವೆಯು ‘ಕೇಶವಾನಂದ ಭಾರತಿ ವರ್ಸಸ್ ಕೇರಳ ಸರ್ಕಾರ ಪ್ರಕರಣ’ ಎಂದೇ ಪ್ರಸಿದ್ಧವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.