ADVERTISEMENT

ಮುಖ್ಯಮಂತ್ರಿಯನ್ನು ಭೇಟಿಯಾಗಿ ಪರಿಹಾರ ಒದಗಿಸಲು ಪ್ರಯತ್ನ: ಶಾಸಕ ಅಶೋಕ್‌ಕುಮಾರ್ ರೈ

​ಪ್ರಜಾವಾಣಿ ವಾರ್ತೆ
Published 2 ಜೂನ್ 2025, 15:16 IST
Last Updated 2 ಜೂನ್ 2025, 15:16 IST
ಧರೆ ಕುಸಿದು ಬೆಳ್ಳಿಪ್ಪಾಡಿ ಗುತ್ತಿನೆ ಮನೆಗೆ ಭೇಟಿನೀಡಿದ ಶಾಸಕ ಅಶೋಕ್‌ಕುಮಾರ್‌ ರೈ ಅವರು ಪರಿಶೀಲನೆ ನಡೆಸಿದರು
ಧರೆ ಕುಸಿದು ಬೆಳ್ಳಿಪ್ಪಾಡಿ ಗುತ್ತಿನೆ ಮನೆಗೆ ಭೇಟಿನೀಡಿದ ಶಾಸಕ ಅಶೋಕ್‌ಕುಮಾರ್‌ ರೈ ಅವರು ಪರಿಶೀಲನೆ ನಡೆಸಿದರು   

ಪುತ್ತೂರು: ಮಳೆ- ಮಳೆಯಿಂದಾಗಿ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 120ಕ್ಕೂ ಅಧಿಕ ಕಡೆ ಧರೆ ಕುಸಿದು ಮನೆ, ಕೊಟ್ಟಿಗೆಗಳಿಗೆ ಹಾನಿಯಾಗಿದೆ. ಕೆಲವು ಕಡೆ ರಸ್ತೆ ಸಂಪರ್ಕ ಕಡಿತಗೊಂಡಿವೆ. ಅಪಾಯ ನಡೆದ ಸ್ಥಳಗಳಿಗೆ ಕಂದಾಯ ಅಧಿಕಾರಿಗಳು ಭೇಟಿ ನೀಡಿದ್ದು, ವರದಿ ಸಿದ್ಧಪಡಿಸುವಂತೆ ಸೂಚನೆ ನೀಡಲಾಗಿದೆ.

ಈ ಬಗ್ಗೆ ಪರಿಹಾರ ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಶಾಸಕ ಅಶೋಕ್‌ಕುಮಾರ್ ರೈ ತಿಳಿಸಿದ್ದಾರೆ.

ಪುತ್ತೂರು ಸೇರಿದಂತೆ ಕರಾವಳಿ ಭಾಗದ ಸಮಸ್ಯೆಯ ಬಗ್ಗೆ ಮುಖ್ಯಮಂತ್ರಿಯನ್ನು ಭೇಟಿಯಾಗಿ ಚರ್ಚೆ ನಡೆಸಿ ಪರಿಹಾರ ಒದಗಿಸಲು ಮನವಿ ಮಾಡುವುದಾಗಿ ಅವರು ತಿಳಿಸಿದ್ದಾರೆ.

ADVERTISEMENT

ಭಾರಿ ಪ್ರಮಾಣದಲ್ಲಿ ಧರೆ ಕುಸಿತಕ್ಕೊಳಗಾದ ಬೆಳ್ಳಿಪ್ಪಾಡಿ ಗುತ್ತಿನೆ ಮನೆಗೆ ಹಾಗೂ ಕೋಡಿಂಬಾಡಿ ಗ್ರಾಮ ಹಾಗೂ ನೆಕ್ಕಿಲಾಡಿ ಗ್ರಾಮದ ವಿವಿಧ ಕಡೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೋಡಿಂಬಾಡಿ ಗ್ರಾಪಂ ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರ್, ಕಾಂಗ್ರೆಸ್ ಜಿಲ್ಲಾ ಘಟಕದ ಕಾರ್ಯದರ್ಶಿ ಮುರಳೀಧರ್ ರೈ ಮಠಂತಬೆಟ್ಟು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.