ಮಂಗಳೂರಿನ ಬಾವುಟಗುಡ್ಡೆಯ ಈದ್ಗಾ ಜುಮ್ಮಾ ಮಸೀದಿಯಲ್ಲಿ ನಡೆದ ನಮಾಜ್‌ನಲ್ಲಿ ಹಲವರು ಭಾಗವಹಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು
ಪ್ರಜಾವಾಣಿ ಚಿತ್ರ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬುಧವಾರ ಈದ್ - ಉಲ್ - ಫಿತ್ರ್ ಹಬ್ಬವನ್ನು ಮುಸ್ಲಿಂ ಸಮುದಾಯದವರು ಸಂಭ್ರಮದಿಂದ ಆಚರಿಸಿದರು.
ರಂಜಾನ್ ತಿಂಗಳ ಉಪವಾಸ ವ್ರತವನ್ನು ಅಂತ್ಯ ಗೊಳಿಸಿ, ಈದ್ ಅನ್ನು ಆಚರಿಸಿದರು.
ಜಿಲ್ಲೆಯ ಎಲ್ಲ ಜುಮ್ಮಾ ಮಸೀದಿ, ಈದ್ಗಾಗಳಲ್ಲಿ ಸಾಮೂಹಿಕ ನಮಾಝ್, ಧಾರ್ಮಿಕ ಪ್ರವಚನಗಳು ನಡೆದವು.
ಹೊಸ ಬಟ್ಟೆ ಧರಿಸಿ ಬಂದಿದ್ದ ಹಿರಿಯರು, ಮಕ್ಕಳು ಪರಸ್ಪರ ಆಲಿಂಗನದ ಮೂಲಕ ಶುಭಾಶಯ ವಿನಿಮಯ ಮಾಡಿಕೊಂಡರು.
ನಗರದ ಬಾವುಟಗುಡ್ಡೆಯ ಈದ್ಗಾ ಜುಮ್ಮಾ ಮಸೀದಿಯಲ್ಲಿ ನಡೆದ ನಮಾಜ್ ನಲ್ಲಿ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಭಾಗಿಯಾದರು.
ಈ ಮಸೀದಿಯಲ್ಲಿ ಜಿಲ್ಲೆಯ ಖಾಝಿ ಅಲಾಜ್ ತ್ವಾಕಾ ಅಹಮ್ಮದ್ ಮುಸ್ಲಿಯಾರ್ ಖುತ್ಬಾ ಪಾರಾಯಣ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.