ADVERTISEMENT

ಮೂಲ್ಕಿ | ಬಾಲಕಿಗೆ ಲೈಂಗಿಕ ಕಿರುಕುಳ: ವೃದ್ಧನ ಬಂಧನ

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2025, 7:52 IST
Last Updated 15 ಡಿಸೆಂಬರ್ 2025, 7:52 IST
<div class="paragraphs"><p>ಬಂಧನ (ಸಾಂದರ್ಭಿಕ ಚಿತ್ರ)</p></div>

ಬಂಧನ (ಸಾಂದರ್ಭಿಕ ಚಿತ್ರ)

   

ಮೂಲ್ಕಿ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಸಂಬಂಧ ಸುರತ್ಕಲ್ ಪೊಲೀಸರು ಹಳೆಯಂಗಡಿ ಬಳಿಯ ಚೇಳಾಯರು ಎಂಬಲ್ಲಿ ವೃದ್ಧನನ್ನು ಬಂಧಿಸಿದ್ದಾರೆ.


ಚೇಳಾಯರು ನಿವಾಸಿ ಸುಂದರ ಪೂಜಾರಿ (60) ಬಂಧಿತ ಆರೋಪಿ. ಟ್ಯೂಶನ್ ಮುಗಿಸಿ ಬಸ್‌ನಲ್ಲಿ ಬಂದು ಮುಕ್ಕದಲ್ಲಿ ಇಳಿದು ತನ್ನ ಮನೆಗೆ ಒಳ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಆರೋಪಿ ನನ್ನನ್ನು ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದ ಎಂದು ಸಂತ್ರಸ್ತ ಬಾಲಕಿ ದೂರಿನಲ್ಲಿ ತಿಳಿಸಿದ್ದಾಳೆ.

ADVERTISEMENT

ಈ ಘಟನೆ 2025ರ ಅಕ್ಟೋಬರ್‌ನಲ್ಲಿ ನಡೆದಿದ್ದು, ಆ ಬಳಿಕ ಬಾಲಕಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದಳು. ಹಾಗಾಗಿ ಆಕೆಯ ತಾಯಿ ವೈದ್ಯರ ಬಳಿ ಕರೆದೊಯ್ದು ತಪಾಸಣೆಗೆ ಒಳಪಡಿಸಿದ್ದರು. ಈ ವೇಳೆ ಬಾಲಕಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ವಿಚಾರ ತಿಳಿಸಿದ್ದಾಗಿ ಪೊಲೀಸರು ಪ್ರಾಥಮಿಕ ವರದಿಯಲ್ಲಿ ತಿಳಿಸಿದ್ದಾರೆ.

ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.