ADVERTISEMENT

ಬಂಟ್ವಾಳ: ಜಿಲ್ಲಾ ಹಿಂದಿ ಸಂಘದ ಅಧ್ಯಕ್ಷರಾಗಿ ಶಿಕ್ಷಕಿ ಗೀತಾ ಕುಮಾರಿ ಆಯ್ಕೆ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2023, 13:19 IST
Last Updated 7 ಸೆಪ್ಟೆಂಬರ್ 2023, 13:19 IST
ಗೀತಾ ಕುಮಾರಿ 
ಗೀತಾ ಕುಮಾರಿ    

ಬಂಟ್ವಾಳ: ಜಿಲ್ಲಾ ಹಿಂದಿ ಸಂಘದ ಅಧ್ಯಕ್ಷರಾಗಿ ಇಲ್ಲಿನ ಬಿ.ಸಿ.ರೋಡು ಕೊಡಂಗೆ ಸರ್ಕಾರಿ ಪ್ರೌಢಶಾಲೆ ಹಿಂದಿ ಶಿಕ್ಷಕಿ ಗೀತಾ ಕುಮಾರಿ ಎನ್.ವಿ. ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಲಕ್ಷ್ಮಣ ಕೆ.ವಿ., ಪ್ರಧಾನ ಕಾರ್ಯದರ್ಶಿಯಾಗಿ ವೆಂಕಟೇಶ್ ಕೆ., ಕೋಶಾಧಿಕಾರಿಯಾಗಿ ರಮಾನಂದ, ಸಂಘಟನಾ ಕಾರ್ಯದರ್ಶಿಯಾಗಿ ಜಯರಾಮ, ಸಹ ಕಾರ್ಯದರ್ಶಿಯಾಗಿ ಶ್ರೀದೇವಿ ಆಯ್ಕೆಯಾಗಿದ್ದಾರೆ.

ಸಂಘದ ರಾಜ್ಯ ಘಟಕದ ಅಧ್ಯಕ್ಷ ಡಿ.ಎಂ.ರಾಥೋಡ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.