ADVERTISEMENT

ಬ್ಯಾನರ್ ಅಳವಡಿಸಿ ಚುನಾವಣಾ ಬಹಿಷ್ಕಾರದ ಎಚ್ಚರಿಕೆ 

ಜನಪ್ರತಿನಿಧಿಗಳ ನಿರ್ಲಕ್ಷ್ಯ ಧೋರಣೆ: ಸನ್ಯಾಸಿಗುಡ್ಡೆ ಜನತಾ ಕಾಲೊನಿ ನಿವಾಸಿಗಳ ಆರೋಪ  

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2026, 7:37 IST
Last Updated 14 ಫೆಬ್ರುವರಿ 2026, 7:37 IST
   

ಪುತ್ತೂರು: ತಾಲ್ಲೂಕಿನ ಕೆದಂಬಾಡಿ ಗ್ರಾಮದ 2ನೇ ವಾರ್ಡ್‌ನಲ್ಲಿ ಬಹುತೇಕ ಕೂಲಿ ಕಾರ್ಮಿಕರೇ ವಾಸ್ತವ್ಯವಿರುವ ಸನ್ಯಾಸಿಗುಡ್ಡೆ ಜನತಾ ಕಾಲೊನಿಗೆ ಸರ್ಕಾರದ ಯಾವುದೇ ಸವಲತ್ತು ತಲುಪಿಲ್ಲ ಎಂದು ಆರೋಪಿಸಿರುವ ಅಲ್ಲಿನ ಮತದಾರರು, ಚುನಾಯಿತ ಜನಪ್ರತಿನಿಧಿಗಳ ನಿರ್ಲಕ್ಷ್ಯ ಧೋರಣೆಯಿಂದ ಬೇಸರಗೊಂಡು ಚುನಾವಣಾ ಬಹಿಷ್ಕಾರದ ನಿರ್ಧಾರ ಕೈಗೊಂಡಿದ್ದು, ಈ ಬಗ್ಗೆ ಬ್ಯಾನರ್ ಅಳವಡಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಮ್ಮ ಬಹುಕಾಲದ ಬೇಡಿಕೆಯಾಗಿದ್ದ ರಸ್ತೆ, ತಡೆಗೋಡೆ, ಬೀದಿ ದೀಪ, ಒಳಚರಂಡಿ ಸಮಸ್ಯೆಗಳಿಗೆ ಸ್ಪಂದಿಸದೆ ಹುಸಿ ಭರವಸೆ ಮಾತ್ರ ನೀಡುತ್ತಿರುವ ವಾರ್ಡ್‌ನ ಪಂಚಾಯಿತಿ ಸದಸ್ಯರಿಂದ ಶಾಸಕರವರೆಗಿನ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಬೇಸರಗೊಂಡಿದ್ದೇವೆ. ಮುಂದಿನ ಪಂಚಾಯಿತಿ ಚುನಾವಣೆಯನ್ನು ನಾವು ಬಹಿಷ್ಕರಿಸುತ್ತಿದ್ದೇವೆ ಎಂದು ಬ್ಯಾನರ್‌ನಲ್ಲಿ ಉಲ್ಲೇಖಿಸಿದ್ದಾರೆ.

ತಡೆಗೋಡೆ ನಿರ್ಮಿಸಿ ರಸ್ತೆ ಪುನರ್ ನಿರ್ಮಿಸುವಂತೆ ಎರಡು ವರ್ಷಗಳಿಂದ ಪಂಚಾಯಿತಿ, ತಹಶೀಲ್ದಾರ್ ಕಚೇರಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಿದ್ದರೂ ಸ್ಪಂದನೆ ಸಿಕ್ಕಿಲ್ಲ ಎಂದು ನಿವಾಸಿಗಳು ದೂರಿದ್ದಾರೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.