ADVERTISEMENT

ಕೊಣಾಜೆ: ಮಳೆಯಿಂದ ನೆಲಕ್ಕುರುಳಿದ ವಿದ್ಯುತ್ ಕಂಬ

​ಪ್ರಜಾವಾಣಿ ವಾರ್ತೆ
Published 21 ಮೇ 2024, 13:30 IST
Last Updated 21 ಮೇ 2024, 13:30 IST
ಕೊಣಾಜೆ ಕುಂಟಾಲಗುಳಿ ಪರಿಸರದಲ್ಲಿ ನೆಲಕ್ಕುರುಳಿದ ವಿದ್ಯುತ್ ಕಂಬಗಳು
ಕೊಣಾಜೆ ಕುಂಟಾಲಗುಳಿ ಪರಿಸರದಲ್ಲಿ ನೆಲಕ್ಕುರುಳಿದ ವಿದ್ಯುತ್ ಕಂಬಗಳು   

ಮುಡಿಪು: ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ‌ ಕೊಣಾಜೆ‌ ಗ್ರಾಮದ ಕುಂಟಾಲಗುಳಿಯಲ್ಲಿ ಮರವೊಂದು ವಿದ್ಯುತ್ ತಂತಿಯ ಮೇಲೆ ಬಿದ್ದು ಸೋಮವಾರ ರಾತ್ರಿ ಐದು ವಿದ್ಯುತ್ ಕಂಬಗಳು ಮುರಿದುಬಿದ್ದಿವೆ.

ಕಂಬ ಉರುಳಿದಾಗ ವಿದ್ಯುತ್ ಸಂಪರ್ಕ ಇರಲಿಲ್ಲ. ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿರುವುದರಿಂದ ಕೊಣಾಜೆ‌ಯ ಕುಂಟಾಲಗುಳಿ,‌ ನಡುಪದವು ಪರಿಸರದಲ್ಲಿ ಮಂಗಳವಾರ ಇಡೀ ದಿನ ವಿದ್ಯುತ್ ಪೂರೈಕೆ ಇರಲಿಲ್ಲ. ಮೆಸ್ಕಾಂ ಸಿಬ್ಬಂದಿ ಹೊಸ ಕಂಬ ಅಳವಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT