ಲಿಲ್ಲಿ ಡಿಸೋಜ
ಮೂಡುಬಿದಿರೆ (ದಕ್ಷಿಣ ಕನ್ನಡ): ಇಲ್ಲಿಗೆ ಸಮೀಪದ ಇರುವೈಲಿನಲ್ಲಿ ತುಂಡಾಗಿ ಬಿದ್ದ ವಿದ್ಯುತ್ ತಂತಿಯನ್ನು ತುಳಿದು ಮಹಿಳೆಯೊಬ್ಬರು ವಿದ್ಯುತ್ ಅಘಾತದಿಂದ ಬುಧವಾರ ಮೃತಪಟ್ಟರು.
ಮೃತ ಮಹಿಳೆಯನ್ನು ಲಿಲ್ಲಿ ಡಿಸೋಜ (52)ಎಂದು ಗುರುತಿಸಲಾಗಿದೆ. ಗಾಳಿ ಮಳೆಗೆ ವಿದ್ಯುತ್ ತಂತಿ ತುಂಡಾಗಿ ಅವರ ಮನೆಯ ಕೊಟ್ಟಿಗೆಯ ಬಳಿ ನೆಲಕ್ಕೆ ಬಿದ್ದಿತ್ತು. ಅದನ್ನು ಗಮನಿಸದ ಮಹಿಳೆ ವಿದ್ಯುತ್ ತಂತಿ ಮೇಲೆ ಕಾಲಿಟ್ಟಿದ್ದರು.
ಮೆಸ್ಕಾಂ ನಿರ್ಲಕ್ಷ್ಯದಿಂದ ಮಹಿಳೆ ಅಸುನೀಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು ಸ್ಥಳದಲ್ಲಿ ಪ್ರತಿಭಟನೆ ನಡೆಸಿದರು. ಈ ಲೋಪಕ್ಕೆ ಕಾರಣವಾದ ಮೆಸ್ಕಾಂ ಅಧಿಕಾರಿಯ ಅಮಾನತಿಗೆ ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.