ಸಾವು
(ಪ್ರಾತಿನಿಧಿಕ ಚಿತ್ರ)
ಉಜಿರೆ: ಬೆಳ್ತಂಗಡಿ ತಾಲ್ಲೂಕಿನ ಕೊಕ್ಕಡ ಗ್ರಾಮದ ಸೌತಡ್ಕ ಗುಂಡಿ ಎಂಬಲ್ಲಿನ ಗೇರುತೋಟದಲ್ಲಿ ಗುರುವಾರ ಬೆಳಿಗ್ಗೆ ಕಾಣಿಸಿಕೊಂಡ ಎರಡು ಕಾಡಾನೆಗಳನ್ನು ಓಡಿಸುವ ಸಂದರ್ಭ ವ್ಯಕ್ತಿ ಮೇಲೆ ಆನೆ ದಾಳಿ ಮಡಿದ್ದು, ಅವರು ಮೃತಪಟ್ಟಿದ್ದಾರೆ.
ಸೌತಡ್ಕ ನಿವಾಸಿ ಬಾಲಕೃಷ್ಣ ಶೆಟ್ಟಿ (70) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.