ADVERTISEMENT

ದಕ್ಷಿಣ ಕನ್ನಡ | ಜಿಲ್ಲೆಯಲ್ಲಿ 11 ಜನರಿಗೆ ಕೋವಿಡ್-19 ದೃಢ

​ಪ್ರಜಾವಾಣಿ ವಾರ್ತೆ
Published 27 ಮೇ 2020, 8:21 IST
Last Updated 27 ಮೇ 2020, 8:21 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ11 ಮಂದಿಯಲ್ಲಿ ಕೋವಿಡ್ -19 ಸೋಂಕು ತಗುಲಿರುವುದು ದೃಢವಾಗಿದೆ.

ದೃಢವಾದ 11 ಮಂದಿಯಲ್ಲಿ10 ಮಂದಿ ಮಹಾರಾಷ್ಟ್ರ ಹಾಗೂ ಒಬ್ಬರು ಗುಜರಾತ್ ರಾಜ್ಯದಿಂದ ಬಂದಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 81ಕ್ಕೆ ಏರಿಕೆಯಾಗಿದೆ.

ಈ ಪೈಕಿ 3, 11, ವರ್ಷದ ಮಕ್ಕಳಿಗೂ ಸೋಂಕು ತಗುಲಿದೆ. ಇದಲ್ಲದೆ 36, 59, 17, 45,37 ಮಹಿಳೆ ಹಾಗೂ 35, 46,39 ವರ್ಷದ ಪುರುಷರಲ್ಲಿ ಸೋಂಕು ದೃಢವಾಗಿದ್ದು ಇವರೆಲ್ಲರೂ ಪುತ್ತೂರು, ಬೆಳ್ತಂಗಡಿ ಹಾಗೂ ಉಳ್ಳಾಲದ ಕ್ವಾರೆಂಟೈನ್‌ಗೆ ಒಳಪಡಿಸಲಾಗಿತ್ತು. ಇವರೆಲ್ಲರನ್ನೂ ವೆನ್ಲಾಕ್ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಮುಂದುವರಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.