ಮಂಗಳೂರು: ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್‌ನ 29ನೇ ವಾರ್ಷಿಕ ಮಹಾಸಭೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಆ.23ರಂದು ಬೆಳಿಗ್ಗೆ 11 ಗಂಟೆಗೆ ನಗರದ ಎ.ಜೆ. ಗ್ರ್ಯಾಂಡ್ ಹೋಟೆಲ್‌ನಲ್ಲಿ ನಡೆಯಲಿದೆ.
ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್ ಅಧ್ಯಕ್ಷ ಎ.ಜೆ.ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಮಧ್ಯಾಹ್ನ 12ಕ್ಕೆ ಮೂಡುಬಿದಿರೆಯ ಆಳ್ವಾಸ್ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಅವರಿಗೆ ‘ಎಮಿನೆಂಟ್ ಬಂಟ್ ಪರ್ಸನಾಲಿಟಿ ಅವಾರ್ಡ್ ’ ಪ್ರದಾನ ಮಾಡಲಾಗುವುದು.
ಯಕ್ಷಗಾನ ಕಲಾವಿದ ಸಂಜಯ ಕುಮಾರ್ ಶೆಟ್ಟಿ ಗೋಣಿಬೀಡು ಅವರಿಗೆ ದಿ.ಡಾ.ಡಿ.ಕೆ.ಚೌಟ ದತ್ತಿನಿಧಿ ಪ್ರಶಸ್ತಿ, ಕೃಷಿ ಕ್ಷೇತ್ರದ ಸಾಧನೆಗಾಗಿ ಇಂದಿರಾ ಶೆಟ್ಟಿ ಅವರಿಗೆ ದಿ.ಎಣ್ಮಕಜೆ ಕಲಾವತಿ ಶೆಟ್ಟಿ ದತ್ತಿನಿಧಿ ಪ್ರಶಸ್ತಿ, ಸಿಎ ಅಂತಿಮ ಪರೀಕ್ಷೆಯಲ್ಲಿ 24ನೇ ರ್‍ಯಾಂಕ್ ಪಡೆದ ನಿಶ್ಚಲ್ ರೈ ಅವರಿಗೆ ವೈ.ಆರ್.ಶೆಟ್ಟಿ ದತ್ತಿನಿಧಿ ಪ್ರಶಸ್ತಿ ಹಾಗೂ ರಕ್ಷಾ. ಆರ್.ಶೆಟ್ಟಿ ಅವರಿಗೆ ಗೋಪಾಲ್.ಬಿ.ಶೆಟ್ಟಿ ದತ್ತಿನಿಧಿ ಪ್ರಶಸ್ತಿ ವಿತರಿಸಲಾಗುವುದು ಎಂದು ಪ್ರತಿಷ್ಠಾನದ ಕಾರ್ಯದರ್ಶಿಸುಧೀರ್ ಕುಮಾರ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.