ಉಳ್ಳಾಲ: ಸೋಮೇಶ್ವರ ರುದ್ರಪಾದೆಯಿಂದ ಸಮುದ್ರಕ್ಕೆ ಹಾರಿ ಸೋಮೇಶ್ವರ ಪುರಸಭೆ ಬಳಿ ನಿವಾಸಿ ಪವನ್ ಭಟ್ (29) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಮುದ್ರದ ಅಲೆಯಲ್ಲಿ ಸಿಲುಕಿದ್ದ ಮೃತದೇಹವನ್ನು ಸ್ಥಳೀಯ ಮೀನುಗಾರರು, ಜೀವರಕ್ಷಕ ಈಜುಗಾರರು ಮೇಲಕ್ಕೆತ್ತಿದ್ದಾರೆ.
ಎಂಬಿಎ, ಎಂಜಿನಿಯರಿಂಗ್ ಪದವೀಧರರಾಗಿದ್ದ ಪವನ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಕೋವಿಡ್ ಕಾರಣಕ್ಕೆ ಮನೆಯಿಂದ ಕೆಲಸ ಮಾಡುತ್ತಿದ್ದರು. ಉತ್ತಮ ಹಾಡುಗಾರ, ಗಿಟಾರ್ ವಾದಕರಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.