ADVERTISEMENT

ದೌರ್ಜನ್ಯ ಆರೋಪ: ಈಶ್ವರಮಂಗಲ ವಸತಿ ನಿಲಯದ ಅಡುಗೆ ಸಿಬ್ಬಂದಿಗೆ ಕಡ್ಡಾಯ ರಜೆ

ವಿದ್ಯಾರ್ಥಿಗಳ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2024, 3:14 IST
Last Updated 14 ಫೆಬ್ರುವರಿ 2024, 3:14 IST

ಪುತ್ತೂರು: ಈಶ್ವರಮಂಗಲದಲ್ಲಿರುವ ಮೆಟ್ರಿಕ್‌ಪೂರ್ವ ಪರಿಶಿಷ್ಟ ಪಂಗಡದ ಬಾಲಕರ ವಸತಿ ನಿಲಯದ ಅಡುಗೆ ಸಿಬ್ಬಂದಿಯಿಂದ ಆಗುತ್ತಿರುವ ದೌರ್ಜನ್ಯ ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರಿಂದ ಹಾಗೂ ಮೂರು ದಿನಗಳೊಳಗೆ ಅಡುಗೆ ಸಿಬ್ಬಂದಿಯನ್ನು ಎತ್ತಂಗಡಿ ಮಾಡದಿದ್ದರೆ ಪ್ರತಿಭಟನೆ ನಡೆಸುವುದಾಗಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು ಎಚ್ಚರಿಕೆ ನೀಡಿದ್ದರಿಂದ ಸಮಾಜ ಕಲ್ಯಾಣ ಇಲಾಖೆ ಆರೋಪಿತ ಅಡುಗೆ ಸಿಬ್ಬಂದಿಯನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿದ್ದು, ಪರ್ಯಾಯ ವ್ಯವಸ್ಥೆ ಮಾಡಿದೆ.

ವಸತಿ ನಿಲಯದ ಅಡುಗೆ ಸಿಬ್ಬಂದಿ ಪಿ.ಮಹಮ್ಮದ್ ನಜೀತ್ ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಆರೋಪಿಸಿ, ಅವರ ವಿರುದ್ಧ ಕಾನೂನು ಕೈಗೊಳ್ಳಬೇಕೆಂದು ಆಗ್ರಹಿಸಿ ವಸತಿ ನಿಲಯದ 21 ವಿದ್ಯಾರ್ಥಿಗಳು ಸೋಮವಾರ ಮಧ್ಯಾಹ್ನ ವಸತಿನಿಲಯದ ಪ್ರವೇಶ ದ್ವಾರದ ಬಳಿ ಪ್ರತಿಭಟನೆ ನಡೆಸಿದ್ದರು.

ಈಶ್ವರಮಂಗಲದ ವಸತಿ ನಿಲಯಕ್ಕೆ ಪುತ್ತೂರಿನ ಕೊಂಬೆಟ್ಟು ವಸತಿ ನಿಲಯದ ಸಿಬ್ಬಂದಿಯನ್ನು ಕಳುಹಿಸಿ ಪರ್ಯಾಯ ವ್ಯವಸ್ಥೆ ಮಾಡಿದೆ.

ADVERTISEMENT

ಅಡುಗೆ ಸಿಬ್ಬಂದಿಗೆ ಕಡ್ಡಾಯ ರಜೆಯ ಶಿಕ್ಷೆ ನೀಡಿದ್ದು, ವಸತಿ ನಿಲಯದ ಅಡುಗೆಗೆ ಪರ್ಯಾಯ ಸಿಬ್ಬಂದಿ ನೇಮಕ ಮಾಡಲಾಗಿದೆ ಎಂದು ಪುತ್ತೂರು ಸಮಾಜಕಲ್ಯಾಣ ಇಲಾಖೆ ಅಧಿಕಾರಿ ಮೋಹನ್ ಕುಮಾರ್ ಸಿ.ಎಂ. ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.