ಮೂಡುಬಿದಿರೆ: ಪೆಟ್ರೋಲ್, ಡೀಸೆಲ್ ದರ ಏರುಗತಿಯಲ್ಲಿ ಸಾಗುತ್ತಿರುವುದನ್ನು ವಿರೋಧಿಸಿ ಬುಧವಾರ ಇಲ್ಲಿನ ಕಾಂಗ್ರೆಸ್ ಕಾರ್ಯಕರ್ತರು ನಡೆಸಲು ಉದ್ದೇಶಿಸಿದ್ದ ಸೈಕಲ್ ಜಾಥಾಕ್ಕೆ ಪೊಲೀಸರು ಅನುಮತಿ ನಿರಾಕರಿಸಿದ ಕಾರಣ ಮಾಜಿ ಸಚಿವ ಅಭಯಚಂದ್ರ ಜೈನ್ ಒಬ್ಬರೇ ಬೆಳಿಗ್ಗೆ 9.30ಕ್ಕೆ ಪೇಟೆಯಿಂದ ತಹಶೀಲ್ದಾರ್ ಕಚೇರಿವರೆಗೆ ಸೈಕಲ್ ಜಾಥಾ ನಡೆಸಲಿದ್ದಾರೆ.
25 ಕಾಂಗ್ರೆಸ್ ಕಾರ್ಯಕರ್ತರು ಸೈಕಲ್ ಜಾಥಾ ನಡೆಸಲು ಅನುಮತಿ ಕೋರಿ ಪೊಲೀಸರಿಗೆ ಮನವಿ ಸಲ್ಲಿಸಿದ್ದರು. ಆದರೆ, ಜಾಥಾಕ್ಕೆ ಅನುಮತಿ ನೀಡಲು ನಿರಾಕರಿಸಿದ ಪೊಲೀಸರು, ಕಾನೂನು ಉಲ್ಲಂಘಿಸಿ ಜಾಥಾ ನಡೆಸಿದವರಿಗೆ, ತಲಾ ₹ 10 ಸಾವಿರ ದಂಡ ಹಾಗೂ ಪ್ರಕರಣ ದಾಖಲಿ ಸುವ ಎಚ್ಚರಿಕೆ ನೀಡಿದ್ದಾರೆನ್ನಲಾಗಿದೆ. ಹೀಗಾಗಿ, ಕಾಂಗ್ರೆಸ್ ಸಾಮೂಹಿಕ ಸೈಕಲ್ ಜಾಥಾ ಕೈಬಿಟ್ಟಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರೊಬ್ಬರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.