– ಐಸ್ಟಾಕ್ ಚಿತ್ರ
ಉಜಿರೆ: ಇಲ್ಲಿನ ಎಸ್‌ಡಿಎಂ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಮಾಜ ಕಾರ್ಯ ವಿಭಾಗದಲ್ಲಿ ಬೆಂಗಳೂರಿನ ಮ್ಯಾಜಿಕ್ ಬಸ್ ಇಂಡಿಯಾ ಪ್ರತಿಷ್ಠಾನ ಮತ್ತು ರಿಲಾಯನ್ಸ್ ಪ್ರತಿಷ್ಠಾನದ ಸಹಯೋಗದಲ್ಲಿ ಜೂನ್ 9ರಿಂದ ಮೂರು ದಿನಗಳ ಕಾಲ ಉದ್ಯೋಗಕ್ಕಾಗಿ ಉತ್ಕೃಷ್ಟತೆ ಕುರಿತು ತರಬೇತಿ ಆಯೋಜಿಸಲಾಗಿದೆ
ಅಂದು ಬೆಳಿಗ್ಗೆ 9.30ಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್‌ಕುಮಾರ್ ಕಾರ್ಯಕ್ರಮ ಉದ್ಘಾಟಿಸುವರು. ಎಸ್‌ಡಿಎಂ ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಶ್ವನಾಥ್ ಪಿ. ಅಧ್ಯಕ್ಷತೆ ವಹಿಸುವರು.ಬೆಂಗಳೂರಿನ ಸಿಎಸ್‌ಆರ್ ಯೋಜನಾ ನಿರ್ದೇಶಕ ಧವನ್ ಗೌಡ ಭಾಗವಹಿಸುವರು ಎಂದು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಡೀನ್ ಸೌಮ್ಯ ಬಿ.ಪಿ., ಸಮಾಜಕಾರ್ಯ ವಿಭಾಗದ ಮುಖ್ಯಸ್ಥ ರವಿಕುಮಾರ್, ತರಬೇತಿ ಕಾರ್ಯಕ್ರಮದ ಸಂಯೋಜಕ ಅತುಲ್ ಸೇಮಿತ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.