ADVERTISEMENT

ಹದಿ ಹರೆಯದಲ್ಲಿ ಸವಾಲುಗಳ ಸಹಜ: ಶಾಜಿಯಾಇಲ್ಮಿ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2023, 13:16 IST
Last Updated 7 ಆಗಸ್ಟ್ 2023, 13:16 IST
ಮೂಡುಬಿದಿರೆಯ ಎಕ್ಸಲೆಂಟ್ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ವಕ್ತಾರೆ ಶಾಜಿಯಾ ಇಲ್ಮಿ ಮಾತನಾಡಿದರು
ಮೂಡುಬಿದಿರೆಯ ಎಕ್ಸಲೆಂಟ್ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ವಕ್ತಾರೆ ಶಾಜಿಯಾ ಇಲ್ಮಿ ಮಾತನಾಡಿದರು   

ಮೂಡುಬಿದಿರೆ: ‘ಹದಿಹರೆಯದಲ್ಲಿ ವ್ಯವಸ್ಥೆಯ ವಿರುದ್ಧ ಅಸಹನೆ, ಅಕ್ರೋಶ, ಸವಾಲು ಸಾಮಾನ್ಯವಾಗಿದ್ದು, ಇಂಥ ಸಿಟ್ಟನ್ನು ಧನಾತ್ಮಕ ಉದ್ದೇಶಗಳಿಗೆ ವಿನಿಯೋಗಿಸುವುದರ ಮೂಲಕ ಜೀವನದಲ್ಲಿ ಸಾರ್ಥಕ್ಯವನ್ನು ಕಾಣಬಹುದು’ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರೆ ಶಾಜಿಯಾಇಲ್ಮಿ ಹೇಳಿದರು.

ಇಲ್ಲಿನ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ತನ್ನ ಏಳಿಗೆಯನ್ನಷ್ಟೇ ಗಮನದಲ್ಲಿಟ್ಟುಕೊಂಡು ಕಾರ್ಯನಿರ್ವಹಿಸಿದರೆ ಸವಾಲುಗಳು ಎದುರಾದಾಗ ಎದೆಗುಂದುತ್ತೇವೆ. ಉಳಿದವರ ಹಿತದಲ್ಲಿ ನಮ್ಮ ಹಿತ ಅಡಗಿರುತ್ತದೋ ಆಗ ಸವಾಲುಗಳನ್ನು ಮೀರಿ ಮುನ್ನಡೆಯಲು ಸಾಧ್ಯವಾಗುತ್ತದೆ. ನಮ್ಮ ಬಾಹ್ಯ ಪ್ರಪಂಚಕ್ಕಿಂತ ನಮ್ಮ ಆಂತರಿಕ ಪ್ರಪಂಚ ಮುಖ್ಯವಾಗುತ್ತದೆ’ ಎಂದರು.

ADVERTISEMENT

ವೃತ್ತಿಯನ್ನು ನಾವು ಪ್ರೀತಿಸಿದಾಗ ಮಾತ್ರ ನಮ್ಮ ಬದುಕು ಹಸನಾಗುತ್ತದೆ. ಯಾವ ಕೆಲಸ ನಮಗೆ ಹಣಕ್ಕಿಂತ ನೆಮ್ಮದಿ ತಂದುಕೊಡುತ್ತದೆ ಎಂಬುದನ್ನು ಅರಿತುಕೊಳ್ಳಬೇಕು ಎಂದು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಯುವರಾಜ್‌ ಜೈನ್‌ ಮಾತನಾಡಿ, ಧೃಢ ಸಂಕಲ್ಪ, ಛಲ ಇದ್ದರೆ ಯಶಸ್ಸು ಗಳಿಸಲು ಸಾಧ್ಯ ಎಂದರು.

ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್, ಶೈಕ್ಷಣಿಕ ನಿರ್ದೇಶಕ ಡಾ.ಬಿ.ಪಿ.ಸಂಪತ್‌ಕುಮಾರ್‌, ಪ್ರಾಂಶುಪಾಲ ಪ್ರದೀಪ್‌ಕುಮಾರ್‌ ಶೆಟ್ಟಿ ಇದ್ದರು. ವಿಕ್ರಮ್ ನಾಯಕ್ ನಿರೂಪಿಸಿದರು.

ಮೂಡುಬಿದಿರೆಯ ಎಕ್ಸಲೆಂಟ್ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ವಕ್ತಾರೆ ಶಾಜಿಯಾ ಇಲ್ಮಿ ಅವರನ್ನು ಸಂಸ್ಥೆ ಅಧ್ಯಕ್ಷ ಯುವರಾಜ್ ಜೈನ್ ಗೌರವಿಸಿದರು. ಸುದರ್ಶನ್ ಎಂ. ಇದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.