ADVERTISEMENT

ಬಂಟ್ವಾಳ | ಸುಳ್ಳು ಸುದ್ದಿ ಪ್ರಸಾರ; ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2025, 5:17 IST
Last Updated 1 ಸೆಪ್ಟೆಂಬರ್ 2025, 5:17 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬಂಟ್ವಾಳ: ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಉಮ್ಮರ್ ಫಾರೂಕ್ ಎಂಬಾತ ಸಜಿಪಮೂಡ ಗ್ರಾಮದ ದೇರಾಜೆ ಎಂಬಲ್ಲಿ ಇಬ್ಬರು ಅಪರಿಚಿತರು ಹತ್ಯೆ ಮಾಡಲು ಯತ್ನಿಸಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ನೀಡಿದ ಸುಳ್ಳು ದೂರಿನ ಬಗ್ಗೆ ತನಿಖೆಗೆ ಮೊದಲೇ ಸಾಮಾಜಿಕ ಮಾಧ್ಯಮದಲ್ಲಿ ಸುಳ್ಳು ಸುದ್ದಿ ಪ್ರಸಾರ ಮಾಡಿದ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಾಗಿದೆ.

ಈ ಬಗ್ಗೆ ಕಾನೂನು ಬದ್ಧ ಆಧಾರಗಳು ಇಲ್ಲವೆಂದು ಗೊತ್ತಿದ್ದರೂ ಉದ್ದೇಶಪೂರ್ವಕವಾಗಿ ಸುಳ್ಳು ಆಪಾದನೆ ಮಾಡಿರುವ ಅಶ್ರಫ್‌ ಬಂಟ್ವಾಳ ಎಂಬಾತನಿಗೆ ನೋಟಿಸ್ ಜಾರಿ ಮಾಡಿ ಆತನ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.