ADVERTISEMENT

ಪುತ್ತೂರು | ಸುಳ್ಳು ಸುದ್ದಿ ಹರಡಿದ ಆರೋಪ: ಎಸ್‌ಡಿಪಿಐ ಮುಖಂಡನ ವಿರುದ್ಧ ಪ್ರಕರಣ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2025, 6:10 IST
Last Updated 7 ಆಗಸ್ಟ್ 2025, 6:10 IST
<div class="paragraphs"><p>ಪೊಲೀಸ್ – ಪ್ರಾತಿನಿಧಿಕ ಚಿತ್ರ</p></div>

ಪೊಲೀಸ್ – ಪ್ರಾತಿನಿಧಿಕ ಚಿತ್ರ

   

ಪುತ್ತೂರು: ನಗರದ ಬೊಳುವಾರು ಎಂಬಲ್ಲಿ ಕೆಲ ದಿನಗಳ ಹಿಂದೆ ವ್ಯಕ್ತಿಯೊಬ್ಬ ಸಾರ್ವಜನಿಕವಾಗಿ ತಲವಾರು ಪ್ರದರ್ಶಿಸಿದ ಘಟನೆ ಸಂಬಂಧ ಸಾಮಾಜಿಕ ತಾಲತಾಣದಲ್ಲಿ ಕೋಮುದ್ವೇಷ ಉಂಟಾಗುವ ರೀತಿಯಲ್ಲಿ ಸುಳ್ಳು ಮಾಹಿತಿ ಹರಡಿದ ಆರೋಪದಡಿ ಎಸ್‌ಡಿಪಿಐ ಪುತ್ತೂರು ಕ್ಷೇತ್ರ ಸಮಿತಿಯ ಅಧ್ಯಕ್ಷ ಅಶ್ರಫ್ ಬಾವು ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ನಾವು ಭಾರತೀಯ ಸೇನೆ' ಎಂಬ ಫೇಸ್‌ಬುಕ್‌ ಪುಟದಲ್ಲಿ ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷ ಅಶ್ರಫ್ ಬಾವು, ತಲವಾರು ಪ್ರದರ್ಶಿಸಿದ ಘಟನೆಯ ನೈಜತೆಯನ್ನು ಪರಿಶೀಲಿಸದೆ ಸಮಾಜದಲ್ಲಿ ಧರ್ಮ–ಧರ್ಮಗಳ ನಡುವೆ ಮೈಮನಸ್ಸು ಹಾಗೂ ದ್ವೇಷ ಉಂಟಾಗುವ ರೀತಿಯಲ್ಲಿ ಸುಳ್ಳು ಮಾಹಿತಿ ಪ್ರಸಾರ ಮಾಡಿರುವುದು ಕಂಡು ಬಂದ ಹಿನ್ನಲೆಯಲ್ಲಿ ಅವರ ವಿರುದ್ಧ ಮಂಗಳವಾರ ಪ್ರಕರಣ ದಾಖಲಿಸ‌ಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.