ADVERTISEMENT

ಹೆಸರಾಂತ ಕಲಾವಿದ ಮೋಹನ ಸೋನ ನಿಧನ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2020, 4:54 IST
Last Updated 13 ಅಕ್ಟೋಬರ್ 2020, 4:54 IST
ಮೋಹನ ಸೋನ
ಮೋಹನ ಸೋನ   

ಮಂಗಳೂರು: ಹೆಸರಾಂತ ಕಲಾವಿದ ಮೋಹನ ಸೋನ(64) ಅಲ್ಪ ಕಾಲದ ಅಸೌಖ್ಯದಿಂದ ಸೋಮವಾರ ರಾತ್ರಿ ನಿಧನರಾಗಿದ್ದಾರೆ.
ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಮೋಹನಸೋನ ಕೆಲ ಸಮಯದಿಂದ ಅನಾರೋಗ್ಯಕ್ಕೊಳಗಾಗಿದ್ದರು.

ಮೋಹನಸೋನ ಅವರಿಗೆ ಪತ್ನಿ, ಇಬ್ಬರು ಮಕ್ಕಳು, ಸಹೋದರ, ಸಹೋದರಿಯರು ಇದ್ದಾರೆ.

ವಿಟ್ಲದ ಸಿ.ಪಿ.ಸಿ.ಆರ್.ಐ ನಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಮೋಹನ್ ಸೋನ ಈ ಭಾಗದ ಪ್ರಸಿದ್ಧ ಕಲಾವಿದರಾಗಿದ್ದರು. ಚಿತ್ರ ಕಲಾವಿದರಾಗಿ, ರಂಗಭೂಮಿ ನಟರಾಗಿ, ನಿರ್ದೇಶಕರಾಗಿ ಪ್ರತಿಭೆ ಮೆರೆದವರು. ಚೋಮ, ನಾಳೆ ಯಾರಿಗೂ ಇಲ್ಲ, ತೆರೆಗಳಲ್ಲಿ ಅದ್ಭುತ ಅಭಿನಯ ತೋರಿದ್ದರು. ಅನೇಕ ಕಡೆ ಚಿತ್ರಕಲಾ ಪ್ರದರ್ಶನಗಳನ್ನು ಮಾಡಿದ್ದರು. ಸೋಣಂಗೇರಿಯಲ್ಲಿ ಬಯಲು ಚಿತ್ರಾಲಯ ಮಾಡಿ ಇಡೀ ರಾಜ್ಯದ ಗಮನ ಸೆಳೆದಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.