ADVERTISEMENT

ಮಂಗಳೂರು | ಮಗಳ ಮೇಲೆ ಅತ್ಯಾಚಾರ: ತಂದೆ ಬಂಧನ

3 ವರ್ಷಗಳಿಂದ ಲೈಂಗಿಕ ದೌರ್ಜನ್ಯ ನಡೆಸಿದ್ದ ಆರೋಪಿ– ಪೊಕ್ಸೊ ಕಾಯ್ದೆಯಡಿ ಎಫ್‌ಐಆರ್‌

​ಪ್ರಜಾವಾಣಿ ವಾರ್ತೆ
Published 22 ಜೂನ್ 2025, 14:55 IST
Last Updated 22 ಜೂನ್ 2025, 14:55 IST
<div class="paragraphs"><p>ಬಂಧನ </p></div>

ಬಂಧನ

   

ಮಂಗಳೂರು: ಮಗಳ  ಮೇಲೆ ಮೂರು ವರ್ಷಗಳಿಂದ ಅತ್ಯಾಚಾರ ನಡೆಸುತ್ತಿದ್ದ ಆರೋಪದ ಮೇಲೆ ಆಕೆಯ ತಂದೆಯನ್ನು (53 ವರ್ಷ) ನಗರದ ಪೊಲೀಸರು ಬಂಧಿಸಿದ್ದಾರೆ.

‘ನಾನು 17 ವರ್ಷದವಳಿದ್ದಾಗಿನಿಂದ ತಂದೆ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ತಾಯಿ ಕೆಲಸಕ್ಕೆ ಹೋದ ಬಳಿಕ ತಂದೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದರು ಎಂದು ಸಂತ್ರಸ್ತೆ ತಿಳಿಸಿದ್ದಾಳೆ. ಆಕೆಗೆ ಈಗ 20 ವರ್ಷ ವಯಸ್ಸು. ಆಕೆ ಅಪ್ರಾಪ್ತ ವಯಸ್ಸಿನವಳಾಗಿದ್ದಾಲೇ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವುದರಿಂದ ಲೈಂಗಿಕ ದೌರ್ಜನ್ಯದಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ADVERTISEMENT

‘ಸಂತ್ರಸ್ತೆಯು ಕೆಲಸಕ್ಕೆ ಹೋಗಿದ್ದಾಗ ಅಳುತ್ತಾ ಕೂತಿದ್ದಳು. ಆಕೆ ಕೆಲಸಕ್ಕಿದ್ದ ಸಂಸ್ಥೆಯ ಮಾಲೀಕರು ಈ ಬಗ್ಗೆ ವಿಚಾರಿಸಿದಾಗ ತಂದೆಯಿಂದಲೇ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವ ವಿಚಾರವನ್ನು ತಿಳಿಸಿದ್ದಳು. ಅವರು ಈ ವಿಚಾರವನ್ನು ಪೊಲೀಸರ ಗಮನಕ್ಕೆ ತಂದಿದ್ದರು. ಬಳಿಕ ಸಂತ್ರಸ್ತೆಯ ಹೇಳಿಕೆ ಪಡೆದು, ಆಕೆಯ ತಂದೆಯನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.