ವಿಟ್ಲ: 140 ಕುಟುಂಬಗಳ ವ್ಯಾಪ್ತಿ ಹೊಂದಿರುವ, ಬಂಟ್ವಾಳ ತಾಲ್ಲೂಕಿನ ಅಳಿಕೆ ಗ್ರಾಮ ವ್ಯಾಪ್ತಿಯ ಮುಚ್ಚಿರಪದವು ಫಾತಿಮಾ ಮಾತೆಯ ದೇವಾಲಯದ ‘ಫಾತಿಮಾ ಮಾತಾ ಸಮುದಾಯ ಭವನ’ದ ಉದ್ಘಾಟನೆ, ಆರ್ಶೀವಚನ ಮೇ 5ರಂದು ನಡೆಯಲಿದೆ ಎಂದು
ಧರ್ಮಗುರು ಸೈಮನ್ ಡಿಸೋಜ ತಿಳಿಸಿದರು.
ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 9.15ಕ್ಕೆ ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಪೀಟರ್ ಪಾವ್ಲ್ ಸಲ್ಡಾನ ನೇತೃತ್ವದಲ್ಲಿ ಬಲಿಪೂಜೆ, 10ಗಂಟೆಗೆ ಸಮುದಾಯ ಭವನದ ಉದ್ಘಾಟನೆ ನಡೆಯಲಿದೆ ಎಂದರು.
ಶ್ರೀಧಾಮ ಮಾಣಿಲದ ಮೋಹನದಾಸ ಪರಮಹಂಸ ಸ್ವಾಮೀಜಿ, ಕುಕ್ಕಾಜೆ ಕಾಳಿಕಾಂಬಾ ಆಂಜನೇಯ ದೇವಾಸ್ಥಾನ ಧರ್ಮದರ್ಶಿ ಕೃಷ್ಣ ಗುರೂಜಿ, ಪೆರುವಾಯಿ ಜುಮಾ ಮಸೀದಿಯ ಮೊಹಮ್ಮದ್ ಶರೀಫ್ ಮದನಿ, ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್ ಫರೀದ್, ಸಂಸದ ಕ್ಯಾ.ಬ್ರಿಜೇಶ್ ಚೌಟ, ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ, ಐವನ್ ಡಿಸೋಜ, ಮಂಜುನಾಥ ಭಂಡಾರಿ, ಕಿಶೋರ್ ಕುಮಾರ್, ಮುಖ್ಯಮಂತ್ರಿಯ ಉಪಕಾರ್ಯದರ್ಶಿ ಅರುಣ್ ಫುರ್ಟಾಡೊ, ಮುಖಂಡ ಜೆ.ಆರ್.ಲೋಬೊ ಭಾಗವಹಿಸಲಿದ್ದಾರೆ. ಅಂದು ಸಂಜೆ 6 ಗಂಟೆಗೆ ‘ಏರ್ಲಾ ಗ್ಯಾರಂಟಿ ಅತ್ತ್’ ನಾಟಕ ಪ್ರದರ್ಶನಗೊಳ್ಳಲಿದೆ ಎಂದರು.
ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷ ಡೆನಿಸ್ ಮೊಂತೇರೊ, ಕಾರ್ಯದರ್ಶಿ ವೈಲೇಟ್ ಕುವೆಲ್ಲೊ, ಸಮುದಾಯ ಭವನ ಕಟ್ಟಡ ಸಮಿತಿ ಸಂಚಾಲಕ ಚಾರ್ಲ್ಸ್ ಡಿಸೋಜ, ಮಾಧ್ಯಮ ಸಮಿತಿ ಸಂಚಾಲಕ ಎಡ್ವರ್ಡ್ ಡಿಸೋಜ, ಪ್ರವೀಣ್ ಡಿಸೋಜ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.