ADVERTISEMENT

ಪುತ್ತೂರು: ಹಕ್ಕಿಗಳಿಗೆ ನೀರುಣಿಸುವ ಅಭಿಯಾನ

ವಿವೇಕಾನಂದ ಪತ್ರಿಕೋದ್ಯಮ ವಿಭಾಗದಿಂದ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2024, 4:36 IST
Last Updated 7 ಏಪ್ರಿಲ್ 2024, 4:36 IST
<div class="paragraphs"><p>ಪುತ್ತೂರಿನ ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗ ಹಮ್ಮಿಕೊಂಡಿದ್ದ ಹಕ್ಕಿಗಳ ದಾಹ ನೀಗಿಸುವ ಅಭಿಯಾನವನ್ನು ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಪ್ರೊ.ಶ್ರೀಪತಿ ಕಲ್ಲೂರಾಯ ಉದ್ಘಾಟಿಸಿದರು</p></div>

ಪುತ್ತೂರಿನ ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗ ಹಮ್ಮಿಕೊಂಡಿದ್ದ ಹಕ್ಕಿಗಳ ದಾಹ ನೀಗಿಸುವ ಅಭಿಯಾನವನ್ನು ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಪ್ರೊ.ಶ್ರೀಪತಿ ಕಲ್ಲೂರಾಯ ಉದ್ಘಾಟಿಸಿದರು

   

ಪುತ್ತೂರು: ಬೇಸಿಗೆಯ ಬೇಗೆಗೆ ದಣಿದ ಪಕ್ಷಿಗಳ ಬಾಯಾರಿಕೆ ನೀಗಿಸುವ ಕಾರ್ಯಕ್ಕೆ ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗ ಮುಂದಾಗಿದೆ. ತೆಂಗಿನಕಾಯಿಯ ಗೆರಟೆಯಲ್ಲಿ ನೀರು ತುಂಬಿಸಿ ಅದನ್ನು ಮರದ ಕೊಂಬೆಗಳಿಗೆ ಕಟ್ಟಿ ಹಕ್ಕಿಗಳ ದಾಹವನ್ನು ನೀಗಿಸುವ ಅಭಿಯಾನಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.

ಅಭಿಯಾನವನ್ನು ಉದ್ಘಾಟಿಸಿದ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಪ್ರೊ.ಶ್ರೀಪತಿ ಕಲ್ಲೂರಾಯ ಮಾತನಾಡಿ, ಇಂಥ ಅಭಿಯಾನವನ್ನು ಮಾಡಿರುವುದು ಶ್ಲಾಘನೀಯವಾಗಿದ್ದು, ನಿರಂತರವಾಗಿ ನಡೆಯಲಿ ಎಂದರು.

ADVERTISEMENT

ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಮುರಳಿಕೃಷ್ಣ ಕೆ.ಎನ್.ಅವರು ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣುಗಣಪತಿ ಭಟ್, ಇತಿಹಾಸ ವಿಭಾಗದ ಮುಖ್ಯಸ್ಥ ಶ್ರೀಧರ್ ನಾಯ್ಕ್, ಪರೀಕ್ಷಾಂಗ ಕುಲಸಚಿವ ಎಚ್.ಜಿ. ಶ್ರೀಧರ್, ಸ್ನಾತಕೋತ್ತರ ವಿಭಾಗದ ಡೀನ್ ವಿಜಯಸರಸ್ವತಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.