ADVERTISEMENT

ಏಕಗಮ್ಯಾನಂದಜಿಗೆ ಅಭಿನಂದನೆ

ಪ್ರಶಸ್ತಿಯಿಂದ ಮಂಗಳೂರಿಗೆ ಹೆಮ್ಮೆ: ಕಾಮತ್‌

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2021, 14:59 IST
Last Updated 2 ನವೆಂಬರ್ 2021, 14:59 IST
ಮಂಗಳೂರು ಮಹಾನಗರ ಪಾಲಿಕೆ ಸಭಾಂಗಣದಲ್ಲಿ ರಾಮಕೃಷ್ಣ ಮಠದ ಏಕಗಮ್ಯಾನಂದಜಿ ಅವರನ್ನು ಸನ್ಮಾನಿಸಲಾಯಿತು.
ಮಂಗಳೂರು ಮಹಾನಗರ ಪಾಲಿಕೆ ಸಭಾಂಗಣದಲ್ಲಿ ರಾಮಕೃಷ್ಣ ಮಠದ ಏಕಗಮ್ಯಾನಂದಜಿ ಅವರನ್ನು ಸನ್ಮಾನಿಸಲಾಯಿತು.   

ಮಂಗಳೂರು: ಇಲ್ಲಿನ ರಾಮಕೃಷ್ಣ ಆಶ್ರಮಕ್ಕೆ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ನೀಡುವ ರಾಜ್ಯ ಪ್ರಶಸ್ತಿ ಲಭಿಸಿರುವುದು ಸಂತಸ ತಂದಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಹಾಗೂ ಮೇಯರ್ ಪ್ರೇಮಾನಂದ ಶೆಟ್ಟಿ ಹೇಳಿದರು.

ಅಮೃತ ಮಹೋತ್ಸವ ರಾಜ್ಯ ಪ್ರಶಸ್ತಿಗೆ ಆಯ್ಕೆಯಾದ ರಾಮಕೃಷ್ಣಾಶ್ರಮದ ಏಕಗಮ್ಯಾನಂದಜಿ ಅವರನ್ನು ಮಂಗಳೂರು ಪಾಲಿಕೆಯ ವತಿಯಿಂದ ಅಭಿನಂದಿಸಿ ಅವರು ಮಾತನಾಡಿದರು.

ಶ್ರೀಗಳ ನೇತೃತ್ವದಲ್ಲಿ ಸ್ವಚ್ಛ ಭಾರತ ಪರಿಕಲ್ಪನೆಗೆ ವಿಶೇಷ ಕೊಡುಗೆ ನೀಡಲಾಗಿದೆ. ಅವರ ಸೇವೆಯನ್ನು ಗುರುತಿಸಿ ಸರ್ಕಾರ ಪ್ರಶಸ್ತಿ ನೀಡಿರುವುದು ಮತ್ತಷ್ಟು ಸಂತಸ ತಂದಿದೆ. ಇದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಶಾಸಕ ಕಾಮತ್ ಹೇಳಿದರು.

ADVERTISEMENT

ರಾಮಕೃಷ್ಣ ಆಶ್ರಮವು ಮಂಗಳೂರಿನ ಸ್ವಚ್ಛತೆಗೆ ನೀಡಿದ ಕೊಡುಗೆ ಅನನ್ಯ. ರಾಮಕೃಷ್ಣಾಶ್ರಮಕ್ಕೆ ರಾಜ್ಯ ಪ್ರಶಸ್ತಿ ಲಭಿಸಿರುವುದು ನಗರಕ್ಕೆ ಹೆಮ್ಮೆ ತಂದಿದೆ ಎಂದರು.

ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್, ಪಾಲಿಕೆ ಸಚೇತಕ ಸುಧೀರ್ ಶೆಟ್ಟಿ ಕಣ್ಣೂರು, ಸ್ಥಾಯಿ ಸಮಿತಿ ಅಧ್ಯಕ್ಷರಾದ ಸಂದೀಪ್ ಗರೋಡಿ, ಲೀಲಾವತಿ ಪ್ರಕಾಶ್, ಲೋಕೇಶ್ ಬೊಳ್ಳಾಜೆ, ಶೋಭಾ ರಾಜೇಶ್, ಪಾಲಿಕೆ ಸದಸ್ಯರಾದ ಶಶಿಧರ್ ಹೆಗ್ಡೆ, ಭಾಸ್ಕರ್ ಮೊಯಿಲಿ, ಕದ್ರಿ ಮನೋಹರ್ ಶೆಟ್ಟಿ, ಜೆಸಿಂತಾ ಅಲ್ಫ್ರೆಡ್, ಶೈಲೇಶ್ ಶೆಟ್ಟಿ ಅತ್ತಾವರ, ಕಿಶೋರ್ ಕೊಟ್ಟಾರಿ, ರಾಧಾಕೃಷ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.