
ಮಂಗಳೂರು: ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಸಹಯೋಗದಲ್ಲಿ ದಕ್ಷಿಣ ಕನ್ನಡ ಚೆಸ್ ಸಂಸ್ಥೆ (ಡಿಕೆಸಿಎ) ಆಯೋಜಿಸಿರುವ ಫಿಡೆ ರೇಟೆಡ್ ಕ್ಲಾಸಿಕಲ್ ರಾಷ್ಟ್ರೀಯ ಓಪನ್ ಚೆಸ್ ಟೂರ್ನಿ ಇದೇ 26ರಿಂದ 30ರವರೆಗೆ ನಗರದ ತುಳುಭವನದಲ್ಲಿ ನಡೆಯಲಿದೆ.
ಒಟ್ಟು ₹6 ಲಕ್ಷ ಬಹುಮಾನ ಮೊತ್ತದ ಟೂರ್ನಿಯ ಪ್ರತಿ ವಿಭಾಗದಲ್ಲಿ ನಗದು ಮತ್ತು ಟ್ರೋಫಿ ನೀಡಲಾಗುವುದು. 400 ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಡಿಕೆಸಿಎ ಅಧ್ಯಕ್ಷೆ ಅಮರಶ್ರೀ ಅಮರನಾಥ ಶೆಟ್ಟಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
26ರಂದು ಬೆಳಿಗ್ಗೆ 9 ಗಂಟೆಗೆ ಅದಾನಿ ಸಮೂಹದ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ ಅವರು ಟೂರ್ನಿ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಚೆಸ್ ಸಂಸ್ಥೆ ಅಧ್ಯಕ್ಷ ಮಧುಕರ್, ಉದ್ಯಮಿ ರವಿರಾಜ್ ಶೆಟ್ಟಿ, ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ, ರೋಟರಿ ಕ್ಲಬ್ ಮಂಗಳೂರು ಅಧ್ಯಕ್ಷ ಭಾಸ್ಕರ್ ರೈ ಕಟ್ಟ ಭಾಗವಹಿಸುವರು ಎಂದು ಕೆಎಸ್‌ಸಿಎ ಉಪಾಧ್ಯಕ್ಷ ರಮೇಶ್ ಕೋಟೆ ಹೇಳಿದರು.
ಡಿಕೆಸಿಎ ಗೌರವಾಧ್ಯಕ್ಷ ಸುನಿಲ್ ಆಚಾರ್, ಉಪಾಧ್ಯಕ್ಷೆ ವಾಣಿ ಎಸ್.ಪಣಿಕ್ಕರ್, ಕಾರ್ಯದರ್ಶಿ ಸತ್ಯಪ್ರಸಾದ್, ರೋಟರಿ ಕ್ಲಬ್ ಮಾಜಿ ಸಹಾಯಕ ಗವರ್ನರ್ ರಾಜಗೋಪಾಲ ರೈ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.