ADVERTISEMENT

ಕೋಳಿ ಅಂಕಕ್ಕೆ ಪ್ರಚೋದನೆ ಆರೋಪ: ಕಾಂಗ್ರೆಸ್ ಶಾಸಕ ಅಶೋಕ ರೈ ವಿರುದ್ಧ ಎಫ್‌ಐಆರ್

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2025, 0:13 IST
Last Updated 21 ಡಿಸೆಂಬರ್ 2025, 0:13 IST
ಅಶೋಕ್ ಕುಮಾರ್‌ ರೈ 
ಅಶೋಕ್ ಕುಮಾರ್‌ ರೈ    

ವಿಟ್ಲ (ದಕ್ಷಿಣ ಕನ್ನಡ): ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಕೇಪು ಗ್ರಾಮದಲ್ಲಿ ಕೋಳಿ ಅಂಕ ನಡೆಯುತ್ತಿದ್ದ ಸ್ಥಳಕ್ಕೆ ಪೊಲೀಸರು ಶನಿವಾರ ದಾಳಿ ನಡೆಸಿದ್ದು, 16 ಜನರನ್ನು ವಶಕ್ಕೆ ಪಡೆದಿದ್ದಾರೆ. ಕೋಳಿ ಅಂಕಕ್ಕೆ ಬಳಸಿದ್ದ 22 ಹುಂಜಗಳನ್ನು ಹಾಗೂ  ಬಾಲುಗಳನ್ನು (ಚೂಪಾದ ಕತ್ತಿಗಳನ್ನು) ವಶಪಡಿಸಿಕೊಂಡಿದ್ದಾರೆ.  

ಕೋಳಿ ಅಂಕದ ಸ್ಥಳದಲ್ಲಿ ಹಾಜರಿದ್ದ ಹಾಗೂ ಕಾನೂನು ಬಾಹಿರವಾದ ಕೋಳಿ ಅಂಕವನ್ನು ಮುಂದುವರಿಸುವಂತೆ ಜನರನ್ನು ಪ್ರಚೋದಿಸಿ ದುಷ್ಪ್ರೇರಣೆ ನೀಡಿದ ಆರೋಪದ ಮೇಲೆ ಪುತ್ತೂರು ಕ್ಷೇತ್ರದ ಕಾಂಗ್ರೆಸ್‌ ಶಾಸಕ ಅಶೋಕ್ ಕುಮಾರ್ ರೈ ವಿರುದ್ಧವೂ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. 

ಯಾವುದೇ ಪರವಾನಗಿ ಪಡೆಯದೇ, ಕಾನೂನು ಬಾಹಿರ  ಕೃತ್ಯಕ್ಕೆ ಅನುವು ಮಾಡಿಕೊಟ್ಟ ಆರೋಪದ ಮೇಲೆ ಜಾಗದ ಮಾಲೀಕ ಮರಳೀಧರ ರೈ ವಿರುದ್ಧವೂ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.