ಮಂಗಳೂರು: ನಗರದ ಬಲ್ಮಠದಲ್ಲಿರುವ ಬ್ಯಾಂಕ್ ಆಫ್ ಬರೋಡದ ಪ್ರಧಾನ ಕಚೇರಿಯಲ್ಲಿ ಬುಧವಾರ ಮುಂಜಾನೆ ಸುಮಾರು 5 ಗಂಟೆಗೆ ಅಗ್ನಿ ಅನಾಹುತ ನಡೆದಿದ್ದು, ಭಾರೀ ಹಾನಿಯಾಗಿದೆ.
ಅಗ್ನಿ ಅನಾಹುತದಿಂದಾಗಿ ಕಚೇರಿಯಲ್ಲಿದ್ದ ಹಲವು ಎಲೆಕ್ಟ್ರಾನಿಕ್ ಉಪಕರಣಗಳು ಸುಟ್ಟು ಹೋಗಿದೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಅಗ್ನಿ ಶಾಮಕದಳದ ಸಿಬ್ಬಂದಿಗಳು ದೌಡಾಯಿಸಿದ್ದು, ಬೆಂಕಿಯನ್ನು ನಂದಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.