ವಿಟ್ಲ: ಅರಮನೆ ರಸ್ತೆಯ ರಸ್ಕಿನ್ ಕಾಂಪ್ಲೆಕ್ಸ್‌ನಲ್ಲಿ ಎರಡು ಅಂಗಡಿಗಳು ಬೆಂಕಿಗೆ ಆಹುತಿಯಾಗಿವೆ. ಈ ಕಟ್ಟಡದಲ್ಲಿದ್ದ ಇಕ್ಬಾಲ್ ಅವರ ಅಡಿಕೆ ಅಂಗಡಿ ಮತ್ತು ಶರೀಫ್ ಅವರ ತರಕಾರಿ ಅಂಗಡಿಯಲ್ಲಿ ತಡರಾತ್ರಿ ಹೊಗೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಮುರುಳಿಧರ್ ನೇತೃತ್ವದ ಫ್ರೆಂಡ್ಸ್ ವಿಟ್ಲ ತಂಡದ ಸದಸ್ಯರು ಕೂಡಲೇ ವಾಹನದಲ್ಲಿ ನೀರು ತಂದು ಬೆಂಕಿ ನಂದಿಸಲು ಯತ್ನಿಸಿದರು. ಬೆನ್ನಲ್ಲೇ ಪುತ್ತೂರು ವಿಭಾಗದ ಅಗ್ನಿಶಾಮಕ ದಳದ ಸಿಬ್ಬಂದಿ ಬಂದು ಬೆಂಕಿಯನ್ನು ನಂದಿಸಿದರು. ಆದರೆ, ಅಂಗಡಿಯಲ್ಲಿದ್ದ ವಸ್ತುಗಳು ಭಾಗಶಃ ಬೆಂಕಿಗೆ ಆಹುತಿಯಾಗಿದ್ದು, ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.