ADVERTISEMENT

ಸಿಟಿ ಸೆಂಟರ್ ಮಾಲ್‌ನಲ್ಲಿ ಬೆಂಕಿ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2019, 7:51 IST
Last Updated 21 ಫೆಬ್ರುವರಿ 2019, 7:51 IST
   

ಮಂಗಳೂರು: ನಗರದ‌ ಸಿಟಿ ಸೆಂಟರ್ ಮಾಲ್‌ನಲ್ಲಿ ಗುರುವಾರ ಮಧ್ಯಾಹ್ನ ಬೆಂಕಿ ಅವಘಡ ನಡೆದಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ‌ ನಿಯಂತ್ರಿಸಿದ್ದಾರೆ.

ನಾಲ್ಕನೇ ಮಹಡಿಯ ಫುಡ್ ಕೋರ್ಟ್‌ನ ಅಡುಗೆ ಕೋಣೆಯಲ್ಲಿ ಬೆಂಕಿ‌ ಕಾಣಿಸಿಕೊಂಡಿದೆ. ಮಾಲ್‌ನಲ್ಲಿ‌ ದಟ್ಟ ಹೊಗೆ ಕಾಣಿಸಿಕೊಂಡಿದ್ದು, ಮಾಲ್‌ಗೆ ಬಂದಿದ್ದ ಜನರನ್ನು ಹೊರಗೆ ಕಳುಹಿಸಲಾಗಿದೆ.

ಯಾವುದೇ ತೊಂದರೆ ಆಗಿಲ್ಲ. ಬೆಂಕಿ‌ ನಿಯಂತ್ರಿಸಲಾಗಿದ್ದು, ಹೊಗೆ ಆವರಿಸಿದೆ ಎಂದು ಅಗ್ನಿಶಾಮಕದಳದ ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.