ADVERTISEMENT

ನಾಳೆಯಿಂದ ವಿಮಾನ ಯಾನ ಆರಂಭ

​ಪ್ರಜಾವಾಣಿ ವಾರ್ತೆ
Published 23 ಮೇ 2020, 16:19 IST
Last Updated 23 ಮೇ 2020, 16:19 IST

ಮಂಗಳೂರು: ಲಾಕ್‌ಡೌನ್‌ನಿಂದ ಸ್ಥಗಿತಗೊಂಡಿದ್ದ ವಿಮಾನ ಯಾನ ಮತ್ತೆ ಆರಂಭವಾಗುತ್ತಿದೆ. ದೇಶೀಯ ವಿಮಾನ ಯಾನ ಆರಂಭಿಸಲು ನಾಗರಿಕ ವಿಮಾನ ಯಾನ ಸಚಿವಾಲಯ ಸೂಚಿಸಿರುವ ಹಿನ್ನೆಲೆಯಲ್ಲಿ ಸೋಮವಾರ ಮಂಗಳೂರಿನಿಂದ ಬೆಂಗಳೂರು, ಮುಂಬೈ, ಚೆನ್ನೈಗೆ ವಿಮಾನಗಳ ಹಾರಾಟ ಆರಂಭವಾಗಲಿದೆ.

ಇದೇ 25 ರಿಂದ ಮಂಗಳೂರಿನಿಂದ ಇಂಡಿಗೋದ 3 ವಿಮಾನಗಳು ಮುಂಬೈ, ಬೆಂಗಳೂರು, ಚೆನ್ನೈಗೆ ಸಂಚರಿಸಲಿವೆ. ಸ್ಪೈಸ್ ಜೆಟ್‌ನ 3 ವಿಮಾನಗಳು ಬೆಂಗಳೂರು, ಮುಂಬೈಗೆ ಸಂಚರಿಸಲಿದೆ. ಏರ್ ಇಂಡಿಯಾ ವೇಳಾಪಟ್ಟಿ ಇನ್ನೂ ಬಿಡುಗಡೆಯಾಗಿಲ್ಲ.

ಬೆಂಗಳೂರಿನಿಂದ ಮಂಗಳೂರಿಗೆ ಸ್ಪೈಸ್‌ಜೆಟ್ ವಿಮಾನ ನಿತ್ಯ ಬೆಳಿಗ್ಗೆ 8.30ಕ್ಕೆ, ರಾತ್ರಿ 7 ಗಂಟೆಗೆ ಮತ್ತು ಇಂಡಿಗೋ ವಿಮಾನ ಸಂಜೆ 5.55ಕ್ಕೆ, ಮಂಗಳೂರಿನಿಂದ ಬೆಂಗಳೂರಿಗೆ ಸ್ಪೈಸ್ ಜೆಟ್ ವಿಮಾನ ಬೆಳಿಗ್ಗೆ 10.20ಕ್ಕೆ, ರಾತ್ರಿ 9.35 ಹಾಗೂ ಇಂಡಿಗೋ ವಿಮಾನ ಸಂಜೆ 7.30ಕ್ಕೆ ಸಂಚರಿಸಲಿದೆ.

ADVERTISEMENT

ಮುಂಬೈನಿಂದ ಸ್ಪೈಸ್ ಜೆಟ್ ವಿಮಾನ ಬೆಳಿಗ್ಗೆ 7.05ಕ್ಕೆ, ಇಂಡಿಗೋ ಬೆಳಿಗ್ಗೆ 9.30ಕ್ಕೆ ಮಂಗಳೂರಿಗೆ ಹೊರಡಲಿವೆ. ಮಂಗಳೂರಿನಿಂದ ಮುಂಬೈಗೆ ಸ್ಪೈಸ್ ಜೆಟ್ ವಿಮಾನ ಬೆಳಿಗ್ಗೆ 9.05ಕ್ಕೆ, ಇಂಡಿಗೋ ವಿಮಾನ 11.40 ಕ್ಕೆ ತೆರಳಲಿವೆ. ಚೆನ್ನೈನಿಂದ ಮಂಗಳೂರಿಗೆ ಸಂಜೆ 5.45ಕ್ಕೆ ಹಾಗೂ ಮಂಗಳೂರಿನಿಂದ ಚೆನ್ನೈಗೆ ರಾತ್ರಿ 8.05ಕ್ಕೆ ಇಂಡಿಗೋ ವಿಮಾನ ಸಂಚರಿಸಲಿದೆ ಎಂದು ಇಂಡಿಗೋ ಮತ್ತು ಸ್ಪೈಸ್‌ ಜೆಟ್ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.