ADVERTISEMENT

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಭಕ್ತ ಸಾಗರ

​ಪ್ರಜಾವಾಣಿ ವಾರ್ತೆ
Published 1 ಜೂನ್ 2025, 15:51 IST
Last Updated 1 ಜೂನ್ 2025, 15:51 IST
ಕುಕ್ಕೆಯಲ್ಲಿ ಭಕ್ತಸಾಗರ
ಕುಕ್ಕೆಯಲ್ಲಿ ಭಕ್ತಸಾಗರ   

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭಾನುವಾರ ಅಪಾರ ಸಂಖ್ಯೆಯ ಭಕ್ತರು ಭೇಟಿ ನೀಡಿದ್ದರು. ಶುದ್ಧ ಷಷ್ಠಿ, ಆಶ್ಲೇಷ ನಕ್ಷತ್ರ ಮತ್ತು ನಿತ್ಯೋತ್ಸವ ಸಂಪನ್ನವಾಗುವ ದಿನವಾದ್ದರಿಂದ ದೇವರ ದರ್ಶನ ಮಾಡಿ ಸೇವೆ ಸಮರ್ಪಿಸಿದರು.

ಶನಿವಾರ ರಾತ್ರಿಯೇ ಕ್ಷೇತ್ರಕ್ಕೆ ಹೆಚ್ಚಿನ ಭಕ್ತರು ಬಂದಿದ್ದರಿಂದ ದೇವಳದ ವಸತಿ ಗೃಹ, ಖಾಸಗಿ ವಸತಿ ಗೃಹಗಳು ತುಂಬಿದ್ದವು.

ಷಣ್ಮುಖ ಪ್ರಸಾದ ಭೋಜನ ಶಾಲೆಯಲ್ಲಿ ಅತ್ಯಧಿಕ ಭಕ್ತರು ಭೋಜನ ಸ್ವೀಕರಿಸಿದರು. ಭಕ್ತರ ಅನುಕೂಲಕ್ಕಾಗಿ ಆದಿಸುಬ್ರಹ್ಮಣ್ಯ ಭೋಜನ ಶಾಲೆಯಲ್ಲೂ ಪ್ರಸಾದ ವ್ಯವಸ್ಥೆಯನ್ನು ಮಾಡಲಾಗಿತ್ತು. ಶೃಂಗೇರಿ ಮಠ, ಗಣಪತಿ ದೇವಸ್ಥಾನದಲ್ಲಿ ಭಕ್ತರಿಗೆ ಪ್ರಸಾದ ವಿತರಿಸಲಾಯಿತು.

ADVERTISEMENT

ಆಶ್ಲೇಷ ನಕ್ಷತ್ರದ ಪುಣ್ಯ ದಿನ 1,822 ಮಂದಿ ಆಶ್ಲೇಷ ಬಲಿ ಸೇವೆ ನೆರವೇರಿಸಿದರು. ಉಳಿದಂತೆ ನಾಗಪ್ರತಿಷ್ಠೆ, ತುಲಾಭಾರ, ಪಂಚಾಮೃತ ಮಹಾಭಿಷೇಕ, ಅಭಿಷೇಕ, ಮಹಾಪೂಜೆ, ಶೇಷ ಸೇವೆ, ನಾಗಪ್ರತಿಷ್ಠೆ, ಕಾರ್ತಿಕ ಪೂಜೆ ಮೊದಲಾದ ಸೇವೆಗಳನ್ನು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ನೆರವೇರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.