ADVERTISEMENT

ವಿದೇಶಿ ಕರೆನ್ಸಿ ವಶ

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2019, 5:35 IST
Last Updated 18 ಆಗಸ್ಟ್ 2019, 5:35 IST

ಮಂಗಳೂರು: ಗುರುವಾರ ರಾತ್ರಿ ಬಜ್ಪೆಯ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ಹೊರಟಿದ್ದ ವ್ಯಕ್ತಿಯೊಬ್ಬ ಅಕ್ರಮವಾಗಿ ಸಾಗಿಸುತ್ತಿದ್ದ ₹ 3.89 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿಯನ್ನು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ ಸಿಬ್ಬಂದಿ ಪತ್ತೆಹಚ್ಚಿದ್ದಾರೆ.

ರಝಾಕ್‌ ಖಲೀಲ್‌ ಖಾಝಿ ಎಂಬಾತ ಸ್ಪೈಸ್‌ ಜೆಟ್‌ ವಿಮಾನದಲ್ಲಿ ದುಬೈಗೆ ಹೊರಟಿದ್ದ. ಆಗ ಲಗೇಜಿನೊಳಗೆ 18,000 ಧೀರಮ್ಸ್‌ ಮತ್ತು 2,000 ರಿಯಾಲ್ಸ್‌ ನೋಟುಗಳನ್ನು ಅಡಗಿಸಿಟ್ಟುಕೊಂಡಿದ್ದ. ಲಗೇಜು ತಪಾಸಣೆ ವೇಳೆ ಸಿಐಎಸ್‌ಎಫ್‌ ಸಬ್‌ ಇನ್‌ಸ್ಪೆಕ್ಟರ್‌ ರಾಕೇಶ್‌ಕುಮಾರ್‌ ಎಂ. ಅವರು ಇದನ್ನು ಪತ್ತೆಹಚ್ಚಿದ್ದಾರೆ.

ತಕ್ಷಣವೇ ಆರೋಪಿಯನ್ನು ವಶಕ್ಕೆ ಪಡೆದು ಕಸ್ಟಮ್ಸ್‌ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ. ಆತನಿಗೆ ಪ್ರಯಾಣಕ್ಕೆ ಅವಕಾಶ ನಿರಾಕರಿಸಿದ್ದು, ಕಸ್ಟಮ್ಸ್‌ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ ಎಂದು ಸಿಐಎಸ್‌ಎಫ್‌ ಮೂಲಗಳು ತಿಳಿಸಿವೆ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.