ADVERTISEMENT

ಕಂಬಳ ಮಾಜಿ ಓಟಗಾರ ಜಯ ಶೆಟ್ಟಿ ಕಕ್ಯಪದವು ನಿಧನ

​ಪ್ರಜಾವಾಣಿ ವಾರ್ತೆ
Published 27 ಜೂನ್ 2021, 14:31 IST
Last Updated 27 ಜೂನ್ 2021, 14:31 IST
ಜಯ ಶೆಟ್ಟಿ ಕಕ್ಯಪದವು
ಜಯ ಶೆಟ್ಟಿ ಕಕ್ಯಪದವು   

ಬಂಟ್ವಾಳ: ಇಲ್ಲಿನ ಉಳಿ ಗ್ರಾಮದ ಕಕ್ಯಪದವು ಕಿಂಜಾಲು ನಿವಾಸಿ, ಕಂಬಳ ಮಾಜಿ ಓಟಗಾರ ಜಯ ಶೆಟ್ಟಿ ಕಕ್ಯಪದವು (69) ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾದರು. ಮೃತರಿಗೆ ಪತ್ನಿ ಮತ್ತು ಮೂವರು ಪುತ್ರಿಯರು ಇದ್ದಾರೆ.

ವಿವಿಧ, ಧಾರ್ಮಿಕ, ಸಹಕಾರಿ ಮತ್ತು ಸಾಮಾಜಿಕ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದರು. ಉಳಿ ಗ್ರಾಮದಲ್ಲಿ ವಿವಿಧ ಸರ್ಕಾರಿ ಸೌಲಭ್ಯಗಳ ಕೊರತೆಯ ನಡುವೆಯೂ ಕೃಷಿ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ್ದರು.

ಕಕ್ಯಪದವು ಡೀಕಯ್ಯ ಪೂಜಾರಿ, ಪುಣ್ಕೆದಡಿ ಅಣ್ಣು ಭಂಡಾರಿ ಅವರ ಕೋಣಗಳನ್ನು ಓಡಿಸುತ್ತಿದ್ದ ಅವರು ಬಳಿಕ ಕಾಡಬೆಟ್ಟು ದಿವಂಗತ ನಾರಾಯಣ ರೈ ಅವರ ಕೋಣಗಳನ್ನು ಹಗ್ಗ ಹಿರಿಯ ವಿಭಾಗದಲ್ಲಿ ಓಡಿಸಿ ಒಂದೂವರೆ ದಶಕಗಳ ಕಾಲ ನಿರಂತರ ಪದಕ ಗಳಿಸಿ ನಂಬರ್ ಒನ್ ಸ್ಥಾನದಲ್ಲಿ ಮಿಂಚಿದ್ದರು. ಸಂಭಾವನೆ ಪಡೆಯದೆ ಕಂಬಳದಲ್ಲಿ ಸೇವೆ ಸಲ್ಲಿಸಿದ ಹಿರಿಮೆ ಹೊಂದಿದ್ದರು.

ADVERTISEMENT

ಕಕ್ಯಬೀಡು ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿ, ಶಾಲಾಭಿವೃದ್ಧಿ ಸಮಿತಿ ಸದಸ್ಯರಾಗಿ, ಉಳಿ ಸೇವಾ ಸಹಕಾರಿ ಸಂಘದ ನಿರ್ದೇಶಕರಾಗಿ, ಕಕ್ಯಪದವು ಕಡಂಬಿಲ್ತಾಯಿ, ಕೊಡಮಣಿತ್ತಾಯಿ ಬ್ರಹ್ಮ ಬೈದರ್ಕಳ ಗರಡಿ ಜೀರ್ಣೋದ್ಧಾರ ಸಮಿತಿ ಮತ್ತು ಮೈರ ರಾಮಾಂಜನೇಯ ಗೆಳೆಯರ ಬಳಗದ ವತಿಯಿಂದ ನಡೆಯುತ್ತಿರುವ ಸತ್ಯ-ಧರ್ಮ ಜೋಡುಕರೆ ಬಯಲು ಕಂಬಳ ಸಮಿತಿ ಗೌರವ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.