ಬಂಟ್ವಾಳ: ಕುಲಾಲ ಸಮುದಾಯ ಸಂಘಟಿತರಾಗಿ ಸ್ವಾವಲಂಬನೆ ಸಾಧಿಸಬೇಕು ಎಂದು ಮಾಣಿಲ ಶ್ರೀಧಾರ ಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು.
ನರಿಕೊಂಬು ಕುಂಬಾರ ಯಾನೆ ಕುಲಾಲರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕುಲಾಲ ಸಮುದಾಯ ಭವನಕ್ಕೆ ಶಿಲಾನ್ಯಾಸ ನೆರವೇರಿಸಿ ಅವರು ಆಶೀರ್ವಚನ ನೀಡಿದರು. ಸಂಘದ ಸಂಘದ ಅಧ್ಯಕ್ಷ ಎಂ.ಪಿ. ಸುಂದರ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಅಧ್ಯಕ್ಷ ಮಯೂರ್ ಉಳ್ಳಾಲ್ ಉದ್ಘಾಟಿಸಿದರು.
ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ, ಮಾಜಿ ಸಚಿವ ಬಿ.ರಮಾನಾಥ ರೈ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಕಸ್ತೂರಿ ಪಂಜ, ನರಿಕೊಂಬು ಗ್ರಾಮ ಪಂಚಾಯಿತಿ ಅಧ್ಯಕ್ಷ ಸಂತೋಷ್ ಕುಮಾರ್, ಮುಖಂಡ ಕೆ.ಹರಿಕೃಷ್ಣ ಬಂಟ್ವಾಳ, ಬೂಡ ಅಧ್ಯಕ್ಷ ಬೇಬಿ ಕುಂದರ್, ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನ ಅಧ್ಯಕ್ಷ ಸುಂದರ ಕುಲಾಲ್, ಟ್ರಸ್ಟ್ ಅಧ್ಯಕ್ಷ ಪ್ರೇಮಾನಂದ ಕುಲಾಲ್, ಸೇವಾ ಸಮಿತಿ ಅಧ್ಯಕ್ಷ ಕಿರಣ್ ಅಟ್ಲೂರು, ದಿನೇಶ್ ಕುಲಾಲ್, ಬಂಟ್ವಾಳ ಸಮಾಜ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸುರೇಶ್ ಕುಲಾಲ್, ಉಪಾಧ್ಯಕ್ಷ ಜನಾರ್ದನ ಬೊಂಡಾಲ, ಬಿಜೆಪಿ ಕ್ಷೇತ್ರಾಧ್ಯಕ್ಷ ಚೆನ್ನಪ್ಪ ಆರ್. ಕೋಟ್ಯಾನ್, ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪುರುಷೋತ್ತಮ ಸಾಲಿಯಾನ್, ಮೂಡಿಗೆರೆ ಕುಲಾಲ ಸಂಘದ ಅಧ್ಯಕ್ಷ ಹರೀಶ್ ಮೂಡಿಗೆರೆ, ಉದ್ಯಮಿ ಯು.ರಾಮ ಉಪ್ಪಿನಂಗಡಿ ಇದ್ದರು.
ಮೋಹನ್ ಎಂ.ಕೆ. ಸ್ವಾಗತಿಸಿದರು. ವಸಂತ್ ಕುಲಾಲ್ ಭೀಮಗದ್ದೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಕರುಣಾಕರ ಕುಲಾಲ್ ನಾಯಿಲ ವಂದಿಸಿದರು. ಎಚ್ಕೆ ನಯನಾಡು ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.