ಮಂಗಳೂರು: ಜಿಲ್ಲೆಯ ಕಡಬ ತಾಲ್ಲೂಕಿನ ರಾಮಕುಂಜ ಗ್ರಾಮದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪಶುಪಾಲನೆ–ಪಶು ವೈದ್ಯಕೀಯ ಇಲಾಖೆ, ಜಿಲ್ಲಾ ಪ್ರಾಣಿ ದಯಾ ಸಂಘ ಮತ್ತು ರಾಮಕುಂಜ ಗ್ರಾಮ ಪಂಚಾಯತ್ ಸಹಯೋಗದಲ್ಲಿ ನಿರ್ಮಿಸುವ ಗೋಶಾಲೆಗೆ ಬುಧವಾರ ಭೂಮಿಪೂಜೆ ನೆರವೇರಿಸಲಾಯಿತು.
ಶಂಕುಸ್ಥಾಪನೆ ನೆರವೇರಿಸಿದ ಪಶು ಸಂಗೋಪನೆ ಇಲಾಖೆಯ ಸಚಿವ ಪ್ರಭು ಬಿ ಚೌಹಾಣ್ ‘ಗೋಹತ್ಯೆ ನಿಷೇಧ ಕಾನೂನನ್ನು ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತಿದ್ದು ಈ ವರೆಗೆ 15 ಸಾವಿರ ಹಸುಗಳನ್ನು ರಕ್ಷಿಸಲಾಗಿದೆ. 700ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಲಾಗಿದೆ’ ಎಂದರು.
‘ಎಲ್ಲ ಜಿಲ್ಲೆಗಳಲ್ಲಿ ಪ್ರಾಣಿ ಸಹಾಯವಾಣಿ ಕೇಂದ್ರ ಆರಂಭಿಸಲಾಗಿದೆ. ಸದ್ಯದಲ್ಲೇ ಪಶುಸಂಜೀವಿನಿ ಆಂಬುಲೆನ್ಸ್ ಎಲ್ಲ ತಾಲೂಕುಗಳಲ್ಲಿ ಕಾರ್ಯನಿರ್ವಹಿಸಲಿದೆ‘ ಅವರು ವಿವರಿಸಿದರು.
ಶಾಸಕ ಸಂಜೀವ ಮಠಂದೂರು, ಸಂಸದ ನಳಿನ್ ಕುಮಾರ್ ಕಟೀಲ್, ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್, ತಹಶೀಲ್ದಾರ್ ಅನಂತ ಶಂಕರ್, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಭಂಡಾರಿ, ರಾಮಕುಂಜ ಗ್ರಾಮ ಪಂಚಾಯತಿ ಅಧ್ಯಕ್ಷೆ ಮಾಲತಿ, ಪಶುಪಾಲನೆ ಇಲಾಖೆಯ ಹೆಚ್ಚುವರಿ ನಿರ್ದೇಶಕ ಡಾ.ಶ್ರೀನಿವಾಸ್ ಇದ್ದರು. ಡಾ.ಪ್ರಸನ್ನ ಕುಮಾರ್ ಸ್ವಾಗತಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.