ADVERTISEMENT

ಎಟಿಎಂಗಳಲ್ಲಿ ಸ್ಕಿಮ್ಮಿಂಗ್ ಉಪಕರಣ ಅಳವಡಿಸಿ ವಂಚನೆ: ನಾಲ್ವರ ಬಂಧನ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2021, 8:11 IST
Last Updated 24 ಫೆಬ್ರುವರಿ 2021, 8:11 IST
   

ಮಂಗಳೂರು: ಎಟಿಎಂ ನಲ್ಲಿ ಸ್ಕಿಮ್ಮಿಂಗ್ ಉಪಕರಣ ಅಳವಡಿಸಲು ಯತ್ನಿಸುತ್ತಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ನಗರದ ಮಂಗಳಾದೇವಿಯಲ್ಲಿರುವ ಎಟಿಎಂನಲ್ಲಿ‌ ಈ ವಂಚಕರು ಸ್ಕಿಮ್ಮಿಂಗ್ ಉಪಕರಣ ಅಳವಡಿಸಲು ಯತ್ನಿಸುತ್ತಿದ್ದರು. ಇದನ್ನು ಗಮನಿಸಿದ ಸ್ಥಳಿಯರು ಇವರನ್ನು ಸೆರೆ ಹಿಡಿಯಲು ಹೋದಾಗ ವಂಚಕರು ತಪ್ಪಿಸಿಕೊಳ್ಳಲು ಯತ್ನಿಸಿದ್ದರು. ಕೂಡಲೇ ಮೂವರು ಸೇರಿ ವಂಚಕರನ್ನು ಸೆರೆ ಹಿಡಿದಿದ್ದಾರೆ. ಈ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಕೇರಳದ ಗ್ಲ್ಯಾಡವಿನ್ ಜಿಂಟೋ ಜಾಯ್, ಅಬ್ದುಲ್ ಮಜೀದ್, ರಾಹುಲ್ ಟಿ.ಎಸ್., ದೆಹಲಿಯ ದಿನೇಶ್ ಸಿಂಗ್ ರಾವುತ ಬಂಧಿತ ಆರೋಪಿಗಳು ಎಂದು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ ತಿಳಿಸಿದರು.
ಆರೋಪಿಗಳಿಂದ ಎರಡು ಕಾರು, ಸ್ಕಿಮ್ಮಿಂಗ್ ಉಪಕರಣ, ನಕಲಿ ಎಟಿಎಂ ಕಾರ್ಡ್ ಸೇರಿದಂತೆ ₹25 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಸ್ಕಿಮ್ಮಿಂಗ್ ಅಳವಡಿಸಿ, ಹಣ ದೋಚಿದ ಬಗ್ಗೆ ಮಂಗಳೂರು ಸೈಬರ್ ಕ್ರೈಂ ಠಾಣೆಯಲ್ಲಿ 22 ಪ್ರಕರಣಗಳು ದಾಖಲಾಗಿವೆ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.