ಮಂಗಳೂರು: ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಉಪ ಚುನಾವಣೆಯಲ್ಲಿ ನಾಲ್ವರು ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.
ಕಿಶೋರ್ ಕುಮಾರ್ (ಬಿಜೆಪಿ), ರಾಜು ಪೂಜಾರಿ (ಕಾಂಗ್ರೆಸ್), ಅನ್ವರ್ ಸಾದತ್ ಎಸ್. (ಎಸ್‌ಡಿಪಿಐ) ಮತ್ತು ದಿನಕರ ಉಳ್ಳಾಲ್ (ಪಕ್ಷೇತರ) ಅವರು ಕಣದಲ್ಲಿರುವ ಅಭ್ಯರ್ಥಿಗಳು. ಮುಹಮ್ಮದ್ ರಿಯಾಝ್ ಪಕ್ಷೇತರರಾಗಿ ಸಲ್ಲಿಸಿದ್ದ ನಾಮಪತ್ರವನ್ನು ಹಿಂಪಡೆದರು.
ಇದೇ 21 ರಂದು ಮತದಾನ ಹಾಗೂ 24ರಂದು ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.