ADVERTISEMENT

ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸೋಣ: ಉಮಾನಾಥ ಕೋಟ್ಯಾನ್

ಎಕ್ಸಲೆಂಟ್‌ ಕಾಲೇಜಿನಲ್ಲಿ ಸ್ವಾತಂತ್ರ್ಯದ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2022, 4:29 IST
Last Updated 17 ಆಗಸ್ಟ್ 2022, 4:29 IST
ತ್ರಿವರ್ಣದ ಬಲೂನುಗಳನ್ನು ಹಾರಿ ಬಿಡುವ ಮೂಲಕ ಮೂಡುಬಿದಿರೆಯ ಎಕ್ಸಲೆಂಟ್ ಕಾಲೇಜಿನಲ್ಲಿ ಸೋಮವಾರ ಸ್ವಾತಂತ್ರ್ಯ ಅಮೃತಮಹೋತ್ಸವ ಸಂಭ್ರಮಿಸಲಾಯಿತು. ಶಾಸಕ ಉಮಾನಾಥ ಕೋಟ್ಯಾನ್, ಯುವರಾಜ್ ಜೈನ್, ಅಭಯಚಂದ್ರ ಜೈನ್ ಇದ್ದರು
ತ್ರಿವರ್ಣದ ಬಲೂನುಗಳನ್ನು ಹಾರಿ ಬಿಡುವ ಮೂಲಕ ಮೂಡುಬಿದಿರೆಯ ಎಕ್ಸಲೆಂಟ್ ಕಾಲೇಜಿನಲ್ಲಿ ಸೋಮವಾರ ಸ್ವಾತಂತ್ರ್ಯ ಅಮೃತಮಹೋತ್ಸವ ಸಂಭ್ರಮಿಸಲಾಯಿತು. ಶಾಸಕ ಉಮಾನಾಥ ಕೋಟ್ಯಾನ್, ಯುವರಾಜ್ ಜೈನ್, ಅಭಯಚಂದ್ರ ಜೈನ್ ಇದ್ದರು   

ಮೂಡುಬಿದಿರೆ: ಸ್ವಾಂತತ್ರ್ಯ ಹೋರಾಟಗಾರರ ತ್ಯಾಗ ಬಲಿದಾನಗಳಿಂದ ನಾವು ಇಂದು ಸ್ವತಂತ್ರವಾಗಿ ಇದ್ದೇವೆ ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.

ಕಲ್ಲಬೆಟ್ಟುನಲ್ಲಿರುವ ಎಕ್ಸಲೆಂಟ್ ಕಾಲೇಜಿನಲ್ಲಿ ಸೋಮವಾರ ಸ್ವಾತಂತ್ರ್ಯದ ಅಮೃತಮಹೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಪಥಸಂಚಲನ ಮೂಲಕ ಅತಿಥಿಗಳಿಗೆ ಗೌರವರಕ್ಷೆ ನೀಡಲಾಯಿತು. ಸಂಸ್ಥೆಯಿಂದ ವಿತರಿಸಿದ ಧ್ವಜವನ್ನು ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ತಮ್ಮ ಮನೆಯಲ್ಲಿ ಹಾರಿಸಿ ಕ್ಷಣವನ್ನು ಬಿತ್ತರಿಸಲಾಯಿತು.

ADVERTISEMENT

ಮಾಜಿ ಸಚಿವ ಅಭಯಚಂದ್ರಜೈನ್, ತಹಶೀಲ್ದಾರ್ ಸಚ್ಚಿದಾನಂದ ಸತ್ಯಪ್ಪಕುಚನೂರ್, ಪುರಸಭೆಯ ಉಪಾಧ್ಯಕ್ಷೆ ಸುಜಾತಾ ಶಶಿಧರ್, ಸಂಸ್ಥೆಯ ಅಧ್ಯಕ್ಷ ಯುವರಾಜಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಪ್ರಾಂಶುಪಾಲ ಪ್ರದೀಪ್‌ ಕುಮಾರ್ ಶೆಟ್ಟಿ, ಮುಖ್ಯ ಶಿಕ್ಷಕ ಶಿವಪ್ರಸಾದ್ ಭಟ್ ಇದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.