ADVERTISEMENT

ಸ್ವಾತಂತ್ರ್ಯ ಹೋರಾಟಗಾರ ಮಟ್ಟಾರ ವಿಠ್ಠಲ ಕಿಣಿ ಅವರಿಗೆ ಜಿಲ್ಲಾಡಳಿತದಿಂದ ಸನ್ಮಾನ

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2022, 11:10 IST
Last Updated 9 ಆಗಸ್ಟ್ 2022, 11:10 IST
ಸ್ವಾತಂತ್ಯ ಹೋರಾಟಗಾರ ಮಟ್ಟಾರ ವಿಠಲ ಕಿಣಿ ಅವರನ್ನು ಜಿಲ್ಲಾಡಳಿತದ ವತಿಯಿಂದ ಮಂಗಳವಾರ ಸನ್ಮಾನಿಸಲಾಯಿತು. ತಹಶೀಲ್ದಾರ್‌ ರಶ್ಮಿ, ಹೆಚ್ಚುವರಿ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಮೇಯರ್‌ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಶಾಸಕ ವೇದವ್ಯಾಸ ಕಾಮತ್‌, ಪಾಲಿಕೆ ಆಯುಕ್ತ ಅಕ್ಷಯ್‌ ಶ್ರೀಧರ್‌, ಉಪವಿಭಾಗಾಧಿಕಾರಿ ಮದನ ಗೋಪಾಲ ಹಾಗೂ ಇತರರು ಇದ್ದಾರೆ

ಮಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸ್ವಾತಂತ್ರ್ಯ ಹೋರಾಟಗಾರ ಮಟ್ಟಾರ ವಿಠ್ಠಲ ಕಿಣಿ ಅವರನ್ನು ನಗರದ ಅಳಕೆಯಲ್ಲಿರುವ ಅವರ ಮನೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಮಂಗಳವಾರ ಸನ್ಮಾನಿಸಲಾಯಿತು.

ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಶಾಸಕ ವೇದವ್ಯಾಸ್ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ, ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್, ಹೆಚ್ಚುವರಿ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಅವರು ಕಿಣಿ ಅವರಿಗೆ ಹಾರ ಹಾಕಿ, ಪೇಟಾ ತೊಡಿಸಿ, ಶಾಲು ಹೊದಿಸಿ ಹಣ್ಣು ಹಂಪಲು ನೀಡಿ ಸನ್ಮಾನಿಸಿದರು.

ಈ ವೇಳೆ ಸ್ವಾತಂತ್ರ್ಯ ಚಳುವಳಿಯ ನೆನಪುಗಳನ್ನು ಮಟ್ಟಾರ ವಿಠ್ಠಲ ಕಿಣಿಯವರು ಹಂಚಿಕೊಂಡರು.

ADVERTISEMENT

‘ಸ್ವಾತಂತ್ರ್ಯ ಹೋರಾಟ ಸ್ಫೂರ್ತಿದಾಯಕವಾಗಿತ್ತು. ನಮಗಾಗ ಎಳೆ ವಯಸ್ಸು. ನಾವು ಗಾಂಧೀಜಿಯವರ ಕರೆಯ ಮೇರೆಗೆ 1942ರ ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದೆವು’ ಎಂದು ಕಿಣಿ ಅವರು ತಿಳಿಸಿದರು.

ಮಂಗಳೂರು ಉಪವಿಭಾಗಾಧಿಕಾರಿ ಮದನ್ ಮೋಹನ್, ತಹಶೀಲ್ದಾರ್ ರಶ್ಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್, ಪಾಲಿಕೆ ಸದಸ್ಯರು , ಕಂದಾಯ ಹಾಗೂ ಇತರ ಇಲಾಖೆಗಳ ಅಧಿಕಾರಿಗಳು ವಿಠಲ ಕಿಣಿ ಅವರ ಕುಟುಂಬದ ಸದಸ್ಯರು, ಹಿತೈಷಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.