
ಪ್ರಜಾವಾಣಿ ವಾರ್ತೆ
ಸುರತ್ಕಲ್: ಈಜಲು ಹೋಗಿ ನೀರುಪಾಲಾಗಿದ್ದ ಸುರತ್ಕಲ್ ವಿದ್ಯಾದಾಯಿನಿ ಶಾಲೆಯ ನಾಲ್ಕು ವಿದ್ಯಾರ್ಥಿಗಳ ಕುಟುಂಬದವರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯ ಪರಿಹಾರದ ಚೆಕ್‌ಗಳನ್ನು ಮಾಜಿ ಶಾಸಕ ಮೊಹಿಯುದ್ದೀನ್ ಬಾವ ವಿತರಿಸಿದರು.
ಶಾಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪರಿಹಾರದ ಆದೇಶ ಪ್ರತಿಗಳನ್ನು ಮೃತ ವಿದ್ಯಾರ್ಥಿಗಳ ಪೋಷಕರಿಗೆ ಹಸ್ತಾಂತರಿಸಿದ ಅವರು, ಪೋಷಕರು ಮಕ್ಕಳ ಬಗ್ಗೆ ಎಚ್ಚರ ವಹಿಸಬೇಕು ಎಂದರು.
ಮೊಹಿಯುದ್ದೀನ್ ಬಾವ ಅವರನ್ನು ಶಾಲೆಯ ವತಿಯಿಂದ ಗೌರವಿಸಲಾಯಿತು.
ಎಚ್.ಯು.ಅನಂತಯ್ಯ, ಶ್ರೀರಂಗ ಎಚ್., ಟಿ.ಎನ್.ರಮೇಶ್, ಎಂ.ರಾಮಚಂದ್ರ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.