ADVERTISEMENT

ಪುತ್ತೂರು: ತಡೆಗೋಡೆ ಕಾಮಗಾರಿ- ₹ 12.50 ಕೋಟಿ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2025, 8:00 IST
Last Updated 16 ಡಿಸೆಂಬರ್ 2025, 8:00 IST
<div class="paragraphs"><p>ಹಣ </p></div>

ಹಣ

   

ಹಣ

ಪುತ್ತೂರು: ಭಾರಿ ಮಳೆಯಿಂದಾಗಿ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧೆಡೆ ಧರೆ ಕುಸಿದು ಹಾನಿಯಾದ ರಸ್ತೆ, ದುರಸ್ತಿಗೆ ಸರ್ಕಾರದಿಂದ ₹ 12.50 ಕೋಟಿ ಅನುದಾನ ಬಿಡುಗಡೆಯಾಗಿದೆ. ಹಾನಿಗೊಂಡ ರಸ್ತೆಗಳ ಪಟ್ಟಿ ಮಾಡಿ ಅನುದಾನ ಹಂಚಿಕೆ ಮಾಡಲಾಗಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.

ADVERTISEMENT

ಕೊಂಬೆಟ್ಟು ತಾಲ್ಲೂಕು ಕ್ರೀಡಾಂಗಣ ಬಳಿಯ ಧರೆ ಕುಸಿಯುವ ಭೀತಿಯಲ್ಲಿದ್ದು, ಅಲ್ಲಿ ತಡೆಗೋಡೆ ನಿರ್ಮಾಣಕ್ಕೆ ₹ 1 ಕೋಟಿ ಅನುದಾನ ಬಿಡುಗಡೆಯಾಗಿದೆ.

ಪುತ್ತೂರು-ಉಪ್ಪಿನಂಗಡಿ-ಗುರುವಾಯನಕೆರೆ ರಾಜ್ಯ ಹೆದ್ದಾರಿಯ ನಾಲ್ಕು ಕಡೆ ತಡೆಗೋಡೆ ರಚನೆಗೆ ₹ 1.90 ಕೋಟಿ, ಸಂಟ್ಯಾರು- ಬೆಟ್ಟಂಪಾಡಿ ಜಿಲ್ಲಾ ಮುಖ್ಯ ರಸ್ತೆಯಲ್ಲಿ ತಡೆಗೋಡೆ ಕಾಮಗಾರಿ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಆಗಿದೆ ಎಂದು ಅಶೋಕ್ ರೈ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.