ADVERTISEMENT

ತಾತ್ಕಾಲಿಕ ಪರಿಹಾರ ಕಾಮಗಾರಿ | ಗಡಿಕಲ್ಲಿನಲ್ಲಿ ಘನ ವಾಹನ ಸಂಚಾರ ಪುನರಾರಂಭ

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2024, 13:52 IST
Last Updated 11 ಸೆಪ್ಟೆಂಬರ್ 2024, 13:52 IST
ಗಡಿಕಲ್ಲು  ರಸ್ತೆ ಬದಿ ಕುಸಿದ ಸ್ಥಳದಲ್ಲಿ ತಾತ್ಕಾಲಿಕ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ
ಗಡಿಕಲ್ಲು  ರಸ್ತೆ ಬದಿ ಕುಸಿದ ಸ್ಥಳದಲ್ಲಿ ತಾತ್ಕಾಲಿಕ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ   

ಸುಬ್ರಹ್ಮಣ್ಯ: ಸುಳ್ಯ ತಾಲ್ಲೂಕಿನ ಕೊಲ್ಲಮೊಗ್ರು ಗ್ರಾಮ ಪಂಚಾಯಿತಿ  ವ್ಯಾಪ್ತಿಯ ಕೊಲ್ಲಮೊಗ್ರು-ಕಲ್ಮಕಾರು ಸಂಪರ್ಕ ರಸ್ತೆಯ ಗಡಿಕಲ್ಲು ಎಂಬಲ್ಲಿ ರಸ್ತೆ ಬದಿಯಲ್ಲಿ ಕುಸಿತ ಉಂಟಾಗಿದ್ದ ಸ್ಥಳದಲ್ಲಿ ತಾತ್ಕಾಲಿಕ ಪರಿಹಾರ ಕಾಮಗಾರಿ ನಡೆಸಲಾಗಿದೆ. ಈ ಮಾರ್ಗದಲ್ಲಿ  ಘನ ವಾಹನ ಸಂಚಾರ ಪುನರಾರಂಭಗೊಂಡಿದೆ.

ಲೋಕೋಪಯೋಗಿ ಇಲಾಖೆ ವತಿಯಿಂದ, ರಸ್ತೆ ಕುಸಿದಿದ್ದ ಸ್ಥಳದಲ್ಲಿ ಕಲ್ಲು ತುಂಬಿಸಿ ಮಣ್ಣು ಕುಸಿಯದಂತೆ ವ್ಯವಸ್ಥೆ ಮಾಡಲಾಗಿದೆ. ರಸ್ತೆಯ ಇನ್ನೊಂದು ಬದಿಯಲ್ಲಿ ಮಣ್ಣು ತೆರವು ಮಾಡಿ, ರಸ್ತೆ ಅಗಲೀಕರಣ ಮಾಡಿದ್ದರಿಂದ ವಾಹನ ಸಂಚಾರಕ್ಕೆ ಅನುಕೂಲವಾಗಿದೆ. ಮುಂದಿನ ದಿನಗಳಲ್ಲಿ ಇಲ್ಲಿ ಶಾಶ್ವತ ಪರಿಹಾರವಾಗಿ ಕಾಂಕ್ರೀಟ್ ತಡೆಗೋಡೆ ನಿರ್ಮಿಸಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT