ADVERTISEMENT

ಗಾಂಧಿ ಜೀವನ ಅಧ್ಯಯನದ ಪಾಠಶಾಲೆ: ನಳಿನ್‌ಕುಮಾರ್ ಕಟೀಲ್

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2023, 14:08 IST
Last Updated 2 ಅಕ್ಟೋಬರ್ 2023, 14:08 IST
<div class="paragraphs"><p>ಮಹಾತ್ಮ ಗಾಂಧಿ ಅವರ 154ನೇ ಜಯಂತಿ ಅಂಗವಾಗಿ ಮಂಗಳೂರಿನಲ್ಲಿ ಸಂಸದ ನಳಿನ್‌ಕುಮಾರ್ ಕಟೀಲ್ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಶಾಸಕ ವೇದವ್ಯಾಸ್ ಕಾಮತ್, ಮೇಯರ್ ಸುಧೀರ್ ಶೆಟ್ಟಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ&nbsp;ಡಾ.ಆನಂದ ಕೆ ಇದ್ದರು</p></div>

ಮಹಾತ್ಮ ಗಾಂಧಿ ಅವರ 154ನೇ ಜಯಂತಿ ಅಂಗವಾಗಿ ಮಂಗಳೂರಿನಲ್ಲಿ ಸಂಸದ ನಳಿನ್‌ಕುಮಾರ್ ಕಟೀಲ್ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಶಾಸಕ ವೇದವ್ಯಾಸ್ ಕಾಮತ್, ಮೇಯರ್ ಸುಧೀರ್ ಶೆಟ್ಟಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆನಂದ ಕೆ ಇದ್ದರು

   

– ಪ್ರಜಾವಾಣಿ ಚಿತ್ರ 

ಮಂಗಳೂರು: ಅಹಿಂಸೆ ಮೂಲಕ ದೇಶದ ಜನರನ್ನು ಒಗ್ಗೂಡಿಸಿ ಬ್ರಿಟಿಷರ ಹಿಡಿತದಿಂದ ದೇಶವನ್ನು ಮುಕ್ತಗೊಳಿಸಿದ ಮಹಾತ್ಮ ಗಾಂಧಿ ಅವರ ಜೀವನ ಅಧ್ಯಯನದ ಪಾಠಶಾಲೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್‌ ಹೇಳಿದರು.

ADVERTISEMENT

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ ಹಾಗೂ ಭಾರತ ಸೇವಾದಳದ ಆಶ್ರಯದಲ್ಲಿ ಇಲ್ಲಿನ ರಾಜಾಜಿ ಪಾರ್ಕ್‌ನಲ್ಲಿ ಸೋಮವಾರ ಆಯೋಜಿಸಿದ್ದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಗಾಂಧಿ ಎಂದರೆ ಒಂದು ಚಿಂತನೆ, ವಿಚಾರಧಾರೆ. ಅಕ್ಟೋಬರ್ 2 ಲಾಲ್‌ ಬಹಾದ್ದೂರ್ ಶಾಸ್ತ್ರಿ ಅವರ ಜನ್ಮದಿನವೂ ಆಗಿದೆ. ಅವರು ಜೈ ಜವಾನ್ ಜೈ ಕಿಸಾನ್ ಎಂದು ಹೇಳುವ ಮೂಲಕ ದೇಶದ ಆರ್ಥಿಕತೆಗೆ ಶಕ್ತಿ ತುಂಬಿದ್ದರು ಎಂದರು.

ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಸರಳತೆ, ಸತ್ಯದ ಮಾರ್ಗದಲ್ಲಿ ನಡೆಯುವಾಗ ಭಯ ಬೇಕಾಗಿಲ್ಲ ಎಂಬುದನ್ನು ತೋರಿಸಿದ್ದ ಗಾಂಧೀಜಿ, ಶಾಂತಿಯ ಮೂಲಕ ಚಳವಳಿ ನಡೆಸಬಹುದು ಎಂಬುದನ್ನು ನಿರೂಪಿಸಿದವರು ಎಂದರು.

ವಾರ್ತಾ ಮತ್ತು ಪ್ರಚಾರ ಇಲಾಖೆಯಿಂದ ಪ್ರೌಢಶಾಲೆ, ಪಿಯುಸಿ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಮಹಾತ್ಮ ಗಾಂಧಿ ಅವರ 154ನೇ ಜಯಂತಿ ಅಂಗವಾಗಿ ಮಂಗಳೂರಿನಲ್ಲಿ ಸಂಸದ ನಳಿನ್‌ಕುಮಾರ್ ಕಟೀಲ್ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಪ್ರದೀಪ್‌ಕುಮಾರ್ ಕಲ್ಕೂರ್ ಮೇಯರ್ ಸುಧೀರ್ ಶೆಟ್ಟಿ ಶಾಸಕ ವೇದವ್ಯಾಸ್ ಕಾಮತ್ ಇದ್ದರು

ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್, ನಗರ ಪೊಲೀಸ್ ಕಮಿಷನರ್‌ ಅನುಪಮ್ ಅಗರ್ವಾಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್, ಹೆಚ್ಚುವರಿ ಜಿಲ್ಲಾಧಿಕಾರಿ ಸಂತೋಷ್‌ಕುಮಾರ್, ಪಾಲಿಕೆ ಆಯುಕ್ತ ಆನಂದ್, ಸೇವಾದಳದ ಸುಧೀರ್ ಟಿ.ಕೆ., ಪ್ರಭಾಕರ ಶ್ರೀಯಾನ್ ಇದ್ದರು.

ಬಶೀರ್ ಬೈಕಂಪಾಡಿ ಸ್ವಾಗತಿಸಿದರು. ವಾರ್ತಾಧಿಕಾರಿ ರವಿರಾಜ್ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.