ADVERTISEMENT

ಮಹಿಳೆಗೆ ಗ್ಯಾಂಗ್‌ರೇಪ್‌ ಬೆದರಿಕೆ: ದೂರು

​ಪ್ರಜಾವಾಣಿ ವಾರ್ತೆ
Published 3 ಜನವರಿ 2021, 4:14 IST
Last Updated 3 ಜನವರಿ 2021, 4:14 IST

ಮಂಗಳೂರು: ಬಿಜೆಪಿಯ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಸಾಮಾಜಿಕ ಕಾರ್ಯಕರ್ತೆಯೊಬ್ಬರಿಗೆ ಫೇಸ್‌ಬುಕ್‌ನಲ್ಲಿ ಗ್ಯಾಂಗ್‌ರೇಪ್ ಬೆದರಿಕೆ ಹಾಕಲಾಗಿದ್ದು, ಈ ಕುರಿತು ನಗರದ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಮಾಜಿಕ ಕಾರ್ಯರ್ತೆಯೊಬ್ಬರು ಇತ್ತೀಚಿನ ಗ್ರಾಮ ಪಂಚಾಯಿತಿ ಚುನಾವಣೆಗೆ ಸಂಬಂಧಿಸಿ ಹೇಳಿಕೆಯೊಂದನ್ನು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದರು. ಇದಕ್ಕೆ ಪ್ರತಿಯಾಗಿ ವ್ಯಕ್ತಿಯೊಬ್ಬ ಇಂಥವರನ್ನು ಗ್ಯಾಂಗ್‌ರೇಪ್ ಮಾಡಬೇಕು. ‘ಎಲ್ಲಾ ಹಿಂದೂ ಅಭಿಮಾನಿಗಳ ಅಭಿಪ್ರಾಯ ತಪ್ಪು. ತನ್ನದೇ ಅಭಿಪ್ರಾಯ ನಿಜ ಎಂದು ದೇಶದ್ರೋಹಿ ತರಹ ಮಾತನಾಡುತ್ತಾಳೆ’ ಎಂಬ ಮಾತಿನೊಂದಿಗೆ ಅವಾಚ್ಯ ಶಬ್ದಗಳನ್ನು ಉಪಯೋಗಿಸಿ ನಿಂದನಾತ್ಮಕ ಹೇಳಿಕೆಯನ್ನು ಹಾಕಿದ್ದಾನೆ.

ಇಂತಹ ವಿಕೃತ ಮನಃಸ್ಥಿತಿಯ ಕುರಿತು ಸಾಮಾಜಿಕ ಜಾಲತಾಣದಲ್ಲೂ ವ್ಯಾಪಕ ಆಕ್ಷೇಪ, ವಿರೋಧ ವ್ಯಕ್ತವಾಗಿದೆ. ಇದೀಗ ವಕೀಲೆಯೊಬ್ಬರ ನೇತೃತ್ವದಲ್ಲಿ ಮಹಿಳಾ ತಂಡ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲಿಸಿದೆ.

ADVERTISEMENT

ನಗರದ ವಿವಿಧ ಸಂಘಟನೆಗಳ ಪ್ರಮುಖರು ಸಾಮಾಜಿಕ ಕಾರ್ಯಕರ್ತೆಗೆ ಬೆಂಬಲ ಸೂಚಿಸಿದ್ದು, ಅತ್ಯಾಚಾರದ ಬೆದರಿಕೆ ಒಡ್ಡಿದ ವಿಕೃತ ಮನಸ್ಸಿಗರಿಗೆ ಶಿಕ್ಷೆ ಆಗಬೇಕು ಎಂದು ಆಗ್ರಹಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.