ADVERTISEMENT

ಮಂಗಳೂರು | ಗಾಂಜಾ ಮಾರಾಟ: ಮತ್ತೆ ಮೂವರು ಆರೋಪಿಗಳ ಬಂಧನ

​ಪ್ರಜಾವಾಣಿ ವಾರ್ತೆ
Published 10 ಜುಲೈ 2025, 5:53 IST
Last Updated 10 ಜುಲೈ 2025, 5:53 IST
<div class="paragraphs"><p>ಬಂಧನ </p></div>

ಬಂಧನ

   

ಮಂಗಳೂರು:‌ ನಗರದ ಪಡುಶೆಡ್ಡೆ ಗ್ರಾಮದ ಹಾಲಾಡಿ ಎಂಬಲ್ಲಿ ಮಾದಕ ವಸ್ತು ಮಾರಾಟ ಮಾಡಿದ ಕುರಿತು ಇದೇ 2ರಂದು ದಾಖಲಾಗಿದ್ದ ಪ್ರಕರಣ ಸಂಬಂಧ ಮತ್ತೆ ಮೂವರು ಆರೋಪಿಗಳನ್ನು ಸೆನ್ ಅಪರಾಧ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಮಧ್ಯಪ್ರದೇಶದ ಬರ್ವಾನಿ ಜಿಲ್ಲೆಯ ಮೋಹನ್ ಪಡವಾ ಗ್ರಾಮದ ಮಾಯಾರಾಮ್ (32 ) ಮಹರಾಷ್ಟ್ರದ ಜಲಗಾಂವ್ ಜಿಲ್ಲೆಯ ಚೋಪ್ಡಾದ ಪ್ರೇಮಸಿಂಗ್ ರಾಮ ಪವಾರ (48 )  ಹಾಗೂ ಅನಿಲ್ ಪ್ರಕಾಶ್ ಕೋಲಿ (35 ) ಬಂಧಿತರು.

ADVERTISEMENT

ಪಡುಶೆಡ್ಡೆ ಗ್ರಾಮದ ಹಾಲಾಡಿ ಎಂಬಲ್ಲಿಪ್ರಕರಣ ಕ್ಕೆ ತಯಾರಿ ನಡೆಸುತ್ತಿದ್ದ ಸ್ಥಳಕ್ಕೆ ಜುಲೈ 2ರಂದು ದಾಳಿ ನಡೆಸಿದ ಪೊಲೀಸರು ಆರೋಪಿಗಳಾದ ನಗರದ ಬಿಕರ್ನಕಟ್ಟೆಯ ಅಡು ಮರೋಳಿಯ ತುಷಾರ್ ಅಲಿಯಾಸ್‌ ಸೋನು (21), ನಾಗುರಿಯ ಧನ್ವಿ ಶೆಟ್ಟಿ (20), ಜಲ್ಲಿಗುಡ್ಡೆಯ ಸಾಗರ್ ಕರ್ಕೇರ (19), ಶಕ್ತಿನಗರ ವಿಕಾಸ್ ಥಾಪ ಅಲಿಯಾಸ್‌ ಪುಚ್ಚಿ (23), ಅಳಕೆ, ಕಂಡೆಟ್ಟುವಿನ ವಿಘ್ನೇಶ್ ಕಾಮತ್ (24) ಎಂಬುವರನ್ನು  ಜುಲೈ 2ರಂದು ಬಂಧಿಸಿದ್ದರು. ಆರೋಪಿಗಳಿಂದ 5.759 ಕೆ.ಜಿ ಗಾಂಜಾ, ಕೃತ್ಯಕ್ಕೆ ಬಳಸಿದ್ದ 6 ಮೊಬೈಲ್ ಫೋನ್‌ ಹಾಗೂ ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದರು.

ಅವರಿಗೆ ಗಾಂಜಾ ಪೂರೈಕೆ ಮಾಡಿದ ಮಾಹಿತಿ ಆಧರಿಸಿ ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶಕ್ಕೆ ಪೊಲೀಶರ ವಿಶೇಷ ತಂಡಗಳನ್ನು ಕಳುಹಿಸಲಾಗಿತ್ತು. ಅಲ್ಲಿ ಮತ್ತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಕೃತ್ಯಕ್ಕೆ ಬಳಸಿದ 3 ಮೊಬೈಲ್ ಫೋನ್‌ಗಳು ಹಾಗೂ ₹  1.79 ಲಕ್ಷ ನಗದನ್ನು ಆರೋಪಿಗಳಿಂದ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.