ADVERTISEMENT

ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿ

​ಪ್ರಜಾವಾಣಿ ವಾರ್ತೆ
Published 19 ಜನವರಿ 2019, 10:58 IST
Last Updated 19 ಜನವರಿ 2019, 10:58 IST
ಮಂಗಳೂರಿನ ಹೊರವಲಯದ ಮರೋಳಿಯಲ್ಲಿ ಶನಿವಾರ ಮಧ್ಯಾಹ್ನ ಗ್ಯಾಸ್‌ ಟ್ಯಾಂಕರ್‌ ಉರುಳಿ ಬಿದ್ದಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಮಂಗಳೂರಿನ ಹೊರವಲಯದ ಮರೋಳಿಯಲ್ಲಿ ಶನಿವಾರ ಮಧ್ಯಾಹ್ನ ಗ್ಯಾಸ್‌ ಟ್ಯಾಂಕರ್‌ ಉರುಳಿ ಬಿದ್ದಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.   

ಮಂಗಳೂರು: ನಗರದ ಹೊರವಲಯದ ಪಡೀಲ್ ಸಮೀಪದ ಮರೋಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಉರುಳಿ ಬಿದ್ದಿದೆ. ಅನಿಲ ಸೋರಿಕೆಯ ಆತಂಕದಿಂದ ಈ ಮಾರ್ಗದಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ.

ಸ್ಥಳೀಯ ನಿವಾಸಿಗಳು ಬೆಂಕಿ ಉರಿಸದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಬಿದ್ದ ರಭಸಕ್ಕೆ ಟ್ಯಾಂಕರಿನಲ್ಲಿದ್ದ ಅಪಾರ ಪ್ರಮಾಣದ ಗ್ಯಾಸ್ ಸೋರಿಕೆಯಾಗುತ್ತಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಆಸುಪಾಸಿನ ಎರಡು ಕಿ.ಮೀ ವ್ಯಾಪ್ತಿಯಲ್ಲಿ ಬೆಂಕಿ ಉರಿಸದಂತೆ ಸೂಚನೆ ನೀಡಲಾಗಿದೆ. ಕಾರ್ಯಾಚರಣೆ ಮುಗಿಯುವವರೆಗೂ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಸದ್ಯಕ್ಕೆ ಯಾವುದೇ ಅಪಾಯ ಇಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.