ಮಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಧಾನಮಂತ್ರಿ ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸುವಂತೆ ಆದೇಶ ಹೊರಡಿಸಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ.
ದೇಶದಾದ್ಯಂತ ಮಾದರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಪ್ರಧಾನಮಂತ್ರಿ ಜನೌಷಧ ಕೇಂದ್ರಗಳು ಕಡಿಮೆ ವೆಚ್ಚದಲ್ಲಿ ಲಕ್ಷಾಂತರ ಜನರಿಗೆ ಉತ್ತಮ ಗುಣಮಟ್ಟದ ಔಷಧ ಒದಗಿಸುತ್ತಿವೆ. ಕರ್ನಾಟಕದಲ್ಲಿಯೂ ನೂರಾರು ಜನೌಷಧ ಕೇಂದ್ರಗಳು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿವೆ. ಆದರೆ, ಆರೋಗ್ಯ ಇಲಾಖೆಯು ಕುಂಟು ನೆಪ ಹೇಳಿ ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು, ತಾಲ್ಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 200ಕ್ಕೂ ಹೆಚ್ಚು ಜನೌಷಧ ಕೇಂದ್ರಗಳನ್ನು ಮುಚ್ಚಿಸುವ ಮೂಲಕ ಬಡವರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.