ADVERTISEMENT

ಮಂಗಳೂರಿನ ಚರಂಡಿಯಲ್ಲಿ ಬಾಲಕಿ ಶವ ಪತ್ತೆ: ಅತ್ಯಾಚಾರದ ಶಂಕೆ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2021, 7:19 IST
Last Updated 22 ನವೆಂಬರ್ 2021, 7:19 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮಂಗಳೂರು: ನಗರದ ಪರಾರಿಯಲ್ಲಿ ಇರುವ ಹೆಂಚು ಕಾರ್ಖಾನೆಯ ಆವರಣದ ಚರಂಡಿಯಲ್ಲಿ 8 ವರ್ಷದ ಬಾಲಕಿಯ ಶವ ಭಾನುವಾರ ಸಂಜೆ ಪತ್ತೆಯಾಗಿದೆ. ಅತ್ಯಾಚಾರ ಎಸಗಿ ಕೊಲೆ ಮಾಡಿರಬಹುದು ಎಂದು ಬಾಲಕಿಯ ಪಾಲಕರು ಅನುಮಾನ ವ್ಯಕ್ತಪಡಿಸಿದ್ದಾರೆ.

ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರ ಪುತ್ರಿ ಸಂಜೆ ಕಾಣೆಯಾಗಿದ್ದಳು. ಹುಡುಕಾಟ ನಡೆಸಿದಾಗ, ಚರಂಡಿಯಲ್ಲಿ ಶವ ಪತ್ತೆಯಾಗಿದೆ.

ಕಾರ್ಖಾನೆಯ ಕಾರ್ಮಿಕರೇ ಈ ಕೃತ್ಯ ಎಸಗಿರಬಹುದು ಎಂದು ಮಗುವಿನ ಪಾಲಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಕಾರ್ಖಾನೆಯಲ್ಲಿ 19 ಕಾರ್ಮಿಕರಿದ್ದು, ಬಹುತೇಕ ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್‌ ಕಮಿಷನರ್‌ ಶಶಿಕುಮಾರ್‌ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.