ಸುಬ್ರಹ್ಮಣ್ಯ: ‘ಎಲ್ಲಿ ಸ್ವಚ್ಛತೆ ಇದೆಯೋ ಅಲ್ಲಿ ಉತ್ತಮ ಆರೋಗ್ಯ ಇರುತ್ತದೆ. ಸ್ವಚ್ಛತೆಯೊಂದಿಗೆ ಆರೋಗ್ಯವನ್ನು ಕೂಡ ಕಾಪಾಡಬೇಕು ಎಂಬ ಉದ್ದೇಶದಿಂದ ಕೇಂದ್ರ ಸರ್ಕಾರವು ಸ್ವಚ್ಛ ಭಾರತ ಯೋಜನೆ ಅಡಿ ಪ್ರತಿ ಮನೆ–ಮನೆಗೂ ಕಡ್ಡಾಯವಾಗಿ ಶೌಚಾಲಯವನ್ನು ನಿರ್ಮಿಸಲು ಮುಂದಾಗಿದೆ. ಹಾಗಾಗಿ ಪ್ರತಿಯೊಬ್ಬರು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು’ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.
ಇಲ್ಲಿನ ಪಂಜ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಆರ್‌ಪಿಎಲ್ ಕಂಪನಿಯು ಸಿಎಸ್‌ಆರ್ ಯೋಜನೆ ಅಡಿ ನಿರ್ಮಿಸಿದ ₹20 ಲಕ್ಷದ ವೆಚ್ಚದ ಬಾಲಕರ ಹಾಗೂ ಬಾಲಕಿಯರ ಶೌಚಾಲಯವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.
ಪಂಜ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿಜಯಲಕ್ಷ್ಮಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ನಾರಾಯಣ ಕೃಷ್ಣ ನಗರ, ಸದಸ್ಯರಾದ ಚಂದ್ರಶೇಖರ ದೇರಾಜೆ, ಲಿಖಿತ್ ಪಲ್ಲೋಡಿ, ಎಸ್‌ಡಿಎಂಸಿ ಅಧ್ಯಕ್ಷ ಲಿಗೋದರ ಆಚಾರ್ಯ, ಉಪಾಧ್ಯಕ್ಷೆ ಸೌಮ್ಯಶ್ರೀ, ಎಂಆರ್‌ಪಿಎಲ್ ಅಧಿಕಾರಿ ಪ್ರದೀಪ್ ಕುಮಾರ್, ಶಾಲಾ ಮುಖ್ಯಶಿಕ್ಷಕಿ ಲೀಲಾ ಕುಮಾರಿ ಟಿ., ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ಸೋಮಶೇಖರ ನೇರಳ, ಪೋಷಕರು, ಎಸ್‌ಡಿಎಂಸಿ ಸದಸ್ಯರು ಈ ವೇಳೆ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.